ಮಾರ್ಚ್ 1 ರಿಂದ ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಪ್ರಾರಂಭವಾಗುತ್ತಿದೆ. ವಿದ್ಯಾರ್ಥಿಗಳಿಗೆ ಅವರ ವಿದ್ಯಾ ಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದಾಗಿ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕೆಎಸ್‍ಆರ್‍ಟಿಸಿ ನಿಗಮವು, ದ್ವಿತೀಯ ಪಿ.ಯು.ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ ಮಾರ್ಚ್ 1 ರಿಂದ 17 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಇವರ ಪ್ರಕಟಣೆ ತಿಳಿಸಿದೆ.
Be the first to comment on "ದ್ವಿತೀಯ ಪಿಯುಸಿ ಪರೀಕ್ಷೆ: ಸರಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣ"