ಬಂಟ್ವಾಳ

ಬ್ರಹ್ಮಕಲಶ ಸಂಭ್ರಮೋತ್ಸವದಲ್ಲಿ ಕಶೆಕೋಡಿ ಕ್ಷೇತ್ರ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

Pic: Praveen digital

ಕುಡಾಲ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಮಾಜದ ಆಡಳಿತಕ್ಕೊಳಪಟ್ಟ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವರ ನೂತನ ಶಿಲಾವಿಗ್ರಹ ಮತ್ತು ನೂತನ ಧ್ವಜಸ್ತಂಭ ಪ್ರತಿಷ್ಠೆ ಮತ್ತು ನವಗ್ರಹರ ಪುನ:ಪ್ರತಿಷ್ಠೆ ಹಿನ್ನೆಲೆಯಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಭಾನುವಾರ ಮಾ.4ರಂದು ನಡೆಯಲಿದೆ.

ಜಾಹೀರಾತು

ಸಂಜೀವಿನಿ ಸಮಾಧಿಸ್ತ ಶ್ರೀ ಪೂರ್ಣಾನಂದ ಸ್ವಾಮಿ ಮಹಾರಾಜ್ ಮತ್ತು ಪರಮಪೂಜ್ಯ ಶ್ರೀ ಪ್ರದ್ಯುಮ್ನಾನಂದ ಸ್ವಾಮೀ ಮಹಾರಾಜ್ ಅವರ ಕೃಪಾಶೀರ್ವಾದ ಹಾಗೂ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಫೆ.27ರಿಂದ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಮಾ.4ರವರೆಗೆ ನಡೆಯಲಿದೆ. ಪ್ರತಿದಿನ ಧಾರ್ಮಿಕ ಸಭಾ ಕಾರ್ಯಕ್ರಮಗಳು ಇಲ್ಲಿ ನಡೆದವು.

ಸ್ವಾಮೀಜಿ ಸ್ವಾಗತ:

ಶುಕ್ರವಾರ ಸಂಜೆ ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಡಿಪೋ ಬಳಿಯಿಂದ ಶ್ರೀ ದಾಭೋಲಿ ಸಂಸ್ಥಾನದ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿಯವರನ್ನು ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.

ಬೆಳಗ್ಗೆ 11.21ರ ಉತ್ತರ ನಕ್ಷತ್ರ ವೃಷಭ ರಾಶಿಯಲ್ಲಿ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿ, ಶ್ರೀಮಠ್ ಸಂಸ್ಥಾನ ದಾಬೋಲಿ ಅವರಿಂದ ಗುರುಭವನ ಪ್ರವೇಶ ಕಾರ್ಯಕ್ರಮ ಶನಿವಾರ ನಡೆಯಿತು. ಬೆಳಗ್ಗೆ 11ರಿಂದ ಅವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ ಉಪನ್ಯಾಸ ನಡೆಯಿತು.

ಭಾನುವಾರ ಏನೇನಿದೆ:

ಬೆಳಗ್ಗೆ 9.30ರಿಂದ ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ 11ರಿಂದ ಭದ್ರತಾ ಕೊಠಡಿ ಉದ್ಘಾಟನೆ ಮತ್ತು ಧಾರ್ಮಿಕ ಉಪನ್ಯಾಸ. ಸಂಜೆ 6ರಿಂದ ಧಾರ್ಮಿಕ ಸಭೆ ನಡೆಯಲಿದೆ. ಈ ಸಂದರ್ಭ ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತಿತರರು ಬಾಗವಹಿಸುವರು ದಾಬೋಲಿ ಸಂಸ್ಥಾನದ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಎಲ್ಲ ಕಾರ್ಯಕ್ರಮಗಳೂ ನಡೆಯುತ್ತವೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.