ಬಂಟ್ವಾಳ

ಶೀಘ್ರ ಸ್ವಂತ ನಿವೇಶನದಲ್ಲಿ ಆರ್.ಟಿ.ಒ. ಕಚೇರಿ: ರಮಾನಾಥ ರೈ

ಆರ್.ಟಿ.ಓ. ಕಚೇರಿಯ ಸ್ವಂತ ಕಟ್ಟಡಕ್ಕೆ ನಿವೇಶನ ಒದಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕಿನ ಮೇಲ್ಕಾರ್ ನಲ್ಲಿರುವ ಬಿರ್ವ ಟವರ್ಸ್ ನಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಚೇರಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಹಿತ ಕಾಪಾಡುವ ಕೆಲಸಗಳು ಇಂದು ಆಗಬೇಕಿದ್ದು, ಆರ್.ಟಿ.ಒ. ಕಚೇರಿಯಲ್ಲಿ ಸುಸಜ್ಜಿತ ವ್ಯವಸ್ಥೆ ಮತ್ತು ಪೂರ್ಣಕಾಲಿಕ ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ರೊಡ್ರಿಗಸ್, ಬಂಟ್ವಾಳ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಕಟ್ಟಡ ಮಾಲೀಕ, ತಾಪಂ ಸದಸ್ಯ ಸಂಜೀವ ಪೂಜಾರಿ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಜವರ್ಮ ಬಲ್ಲಾಳ್, ಸಾರಿಗೆ ಮತ್ತು ರಸ್ತೆ ಸುರಕ್ಷತ ಆಯುಕ್ತ ಬಿ.ದಯಾನಂದ, ಜಂಟಿ ಸಾರಿಗೆ ಆಯುಕ್ತೆ ಎಂ. ಪಿ. ಓಂಕಾರೇಶ್ವರಿ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್. ಹೆಗಡೆ, ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ  ಬಿ.ಶಿವರಾಜ ಪಾಟೀಲ ಉಪಸ್ಥಿತರಿದ್ದರು. ಎ.ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ಸಾರಿಗೆ ಆಯುಕ್ತರಾದ ಬಿ.ದಯಾನಂದ ಅವರು ಪ್ರಸ್ತಾವಿಸಿ,ಸ್ವಾಗತಿಸಿದರು. ಇದೇ ವೇಳೆ ಸಾಂಕೇತಿಕವಾಗಿ ಸ್ಮಾಟ್೯ ಕಾಡ್೯ಪರವಾನಿಗೆ ,ಆರ್. ಸಿ.ಯನ್ನು ವಿತರಿಸಲಾಯಿತು. ನೂತನವಾಗಿ ಆರಂಭವಾಗಿರುವ ಬಂಟ್ವಾಳ  ಸಹಾಯಕ ಪ್ರಾದೇಶಿಕ ಸಾರಿಗೆಕಚೇರಿಯಲ್ಲಿ ನೋಂದಣಿಯಾಗುವ ವಾಹನಗಳು  ಕೆಎ-70 ಸಂಖ್ಯೆಯಲ್ಲಿ ರಸ್ತೆಗಿಳಿಯಲಿವೆ. ಒಟ್ಟು 9 ಸಿಬ್ಬಂದಿಯುಳ್ಳ ಕಚೇರಿಯಿಂದಾಗಿ ಮಂಗಳೂರು ಆರ್ ಟಿ ಒ ಕಚೇರಿಯಲ್ಲಿ ಕೆಲಸದ ಹೊರೆ ಕಡಿಮೆಯಾಗಲಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.