ಬಂಟ್ವಾಳ

ಕಶೆಕೋಡಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ಕುಡಾಲ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಮಾಜದ ಆಡಳಿತಕ್ಕೊಳಪಟ್ಟ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವರ ನೂತನ ಶಿಲಾವಿಗ್ರಹ ಮತ್ತು ನೂತನ ಧ್ವಜಸ್ತಂಭ ಪ್ರತಿಷ್ಠೆ ಮತ್ತು ನವಗ್ರಹರ ಪುನ:ಪ್ರತಿಷ್ಠೆ ಹಿನ್ನೆಲೆಯಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಭಾನುವಾರ ಮಾ.೪ರಂದು ನಡೆಯಿತು.

ಜಾಹೀರಾತು

ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಯಿತು. ಬೆಳಗ್ಗೆ ೯.೩೦ರಿಂದ ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ೧೧ರಿಂದ ಭದ್ರತಾ ಕೊಠಡಿ ಉದ್ಘಾಟನೆ ಮತ್ತು ಧಾರ್ಮಿಕ ಉಪನ್ಯಾಸ ನಡೆದವು. ದಾಬೋಲಿ ಸಂಸ್ಥಾನದ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಆಡಳಿತ ಮೊಕ್ತೇಸರರಾದ ಕಲ್ಲೇಗ ಸಂಜೀವ ನಾಯಕ್, ಆನುವಂಶಿಕ ಮೊಕ್ತೇಸರ ಕಂಟೀಕ ಗೋಪಾಲ ಶೆಣೈ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಲ್ಲಗುಡ್ಡೆ ರಾಜಾರಾಮ ಪ್ರಭು, ಪ್ರಧಾನ ಕಾರ್ಯದರ್ಶಿ ಕಂಟೀಕ ಶಾಂತಾರಾಮ ಶೆಣೈ, ಉಪಾಧ್ಯಕ್ಷರಾದ ಬೋಳಿಯಾರು ಯೋಗೀಶ್ ನಾಯಕ್, ಪ್ರವೀಣ್ ಎಸ್. ದರ್ಬೆ, ಕಾರ್ಯದರ್ಶಿಗಳಾದ ಮರೋಳಿ ಗಣೇಶ್ ಶೆಣೈ, ದಯಾನಂದ ಪ್ರಭು, ಲೆಕ್ಕಪರಿಶೋಧಕರಾದ ಕೆಂಚಪಾಲು ಬಾಲಕೃಷ್ಣ ಪ್ರಭು, ಮಾರ್ಗದರ್ಶಕರಾದ ಕಂಟೀಕ ಅನಂತ ಶೆಣೈ, ಡೆಜ್ಜಾರು ಗಣಪತಿ ಶೆಣೈ, ಆಡಳಿತ ಸಮಿತಿಯ ಕಾರ್ಯನಿರ್ವಾಹಕ ಮೊಕ್ತೇಸರರಾದ ರಾಮ್‌ಗಣೇಶ್ ಪ್ರಭು, ಆರ್ಥಿಕ ಕಾರ್ಯನಿರ್ವಾಹಕ ಮೊಕ್ತೇಸರರಾದ ಪ್ರಭಾಕರ ನಾಯಕ್ ದರ್ಬೆ ಸಹಿತ ಮೊಕ್ತೇಸರರು, ಉತ್ಸವ ಸಮಿತಿ ಪ್ರಮುಖರು ಭಕ್ತರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago