ಮಂಗಳವಾರ ಬೆಳಗ್ಗೆ ತುಂಬೆ ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ನಡೆದ ಅಪಘಾತದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಕೃಷ್ಣಾಪುರ ನಿವಾಸಿ ಗಝಲ್ ಸಾವನ್ನಪ್ಪಿದರೆ, ಜಾವೇದ್ ಗಾಯಗೊಂಡರು. ಬಿ.ಸಿ.ರೋಡಿಗೆ ಇವರಿಬ್ಬರೂ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಪೊಲೀಸ್ ಎಸ್.ಐ. ಯಲ್ಲಪ್ಪ ನೇತೃತ್ವದಲ್ಲಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳು ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…