www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬುಧವಾರ ಸಂಜೆಯ ವೇಳೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನ ಹಲವೆಡೆ ಮಳೆಯಾಗಿದೆ.
ಸುಳ್ಯ, ಪುತ್ತೂರಿನ ಕೆಲವೆಡೆ ಗುಡುಗಿನೊಂದಿದೆ ಮಳೆ ಸುರಿದಿದೆ. ಮಂಗಳೂರು ಸಹಿತ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿದೆ. ಬಿಸಿಲಿನ ಪ್ರಖರತೆ ಇಲ್ಲದಿದ್ದರೂ ಕೆಲವೆಡೆ ಉರಿಸೆಖೆಯ ವಾತಾವರಣ ಕಂಡುಬಂತು.
ಹವಾಮಾನ ಇಲಾಖೆ ಏನು ಹೇಳಿದೆ?
ಕನ್ಯಾಕುಮಾರಿಯಿಂದ ಕಲ್ಲಿಕೋಟೆಯವರೆಗಿನ ಕರಾವಳಿ ತೀರದಲ್ಲಿ ಸಮುದ್ರದ ಒತ್ತಡ ಹಿನ್ನೆಲೆಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ತೀರ ಪ್ರದೇಶಗಳಲ್ಲಿ ಮೋಡ ಹಾಗೂ ಮಳೆಯಾಗುವ ಸಂಭವದ ಕುರಿತು ಹವಾಮಾನ ಇಲಾಖೆ ಎಚ್ಚರಿಸಿತ್ತು. ಸಮುದ್ರ ಅಲೆಗಳ ಎತ್ತರ ಏರಿಕೆಯಾಗುವ ಸಾಧ್ಯತೆ ಇದೆ. ಪ್ರಸಕ್ತ ಈ ಸಮುದ್ರ ಒತ್ತಡ ದಕ್ಷಿಣ ಶ್ರೀಲಂಕಾದಿಂದ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 3 ದಿನಗಳಲ್ಲಿ ಕೇರಳ ಕರಾವಳಿ ತೀರದಲ್ಲಿ 2.5 ರಿಂದ 3.2 ಮೀಟರ್ ವರೆಗೆ ಸಮುದ್ರ ಅಲೆಗಳು ಏರಿಕೆಯಾಗುವ ಸಾಧ್ಯತೆ ಇದೆ.