ಜಿಲ್ಲಾ ಸುದ್ದಿ

ಸಂಜೆಯಾಗುತ್ತಿದ್ದಂತೆ ಪ್ರತ್ಯಕ್ಷಗೊಂಡ ಮಳೆ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬುಧವಾರ ಸಂಜೆಯ ವೇಳೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನ ಹಲವೆಡೆ ಮಳೆಯಾಗಿದೆ.

ಸುಳ್ಯ, ಪುತ್ತೂರಿನ ಕೆಲವೆಡೆ ಗುಡುಗಿನೊಂದಿದೆ ಮಳೆ ಸುರಿದಿದೆ. ಮಂಗಳೂರು ಸಹಿತ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿದೆ. ಬಿಸಿಲಿನ ಪ್ರಖರತೆ ಇಲ್ಲದಿದ್ದರೂ ಕೆಲವೆಡೆ ಉರಿಸೆಖೆಯ ವಾತಾವರಣ ಕಂಡುಬಂತು.

ಹವಾಮಾನ ಇಲಾಖೆ ಏನು ಹೇಳಿದೆ?

ಜಾಹೀರಾತು

ಕನ್ಯಾಕುಮಾರಿಯಿಂದ ಕಲ್ಲಿಕೋಟೆಯವರೆಗಿನ ಕರಾವಳಿ ತೀರದಲ್ಲಿ ಸಮುದ್ರದ ಒತ್ತಡ ಹಿನ್ನೆಲೆಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ತೀರ ಪ್ರದೇಶಗಳಲ್ಲಿ ಮೋಡ ಹಾಗೂ ಮಳೆಯಾಗುವ ಸಂಭವದ ಕುರಿತು ಹವಾಮಾನ ಇಲಾಖೆ ಎಚ್ಚರಿಸಿತ್ತು. ಸಮುದ್ರ ಅಲೆಗಳ ಎತ್ತರ ಏರಿಕೆಯಾಗುವ ಸಾಧ್ಯತೆ ಇದೆ. ಪ್ರಸಕ್ತ  ಈ ಸಮುದ್ರ ಒತ್ತಡ ದಕ್ಷಿಣ  ಶ್ರೀಲಂಕಾದಿಂದ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 3 ದಿನಗಳಲ್ಲಿ ಕೇರಳ ಕರಾವಳಿ ತೀರದಲ್ಲಿ 2.5 ರಿಂದ 3.2 ಮೀಟರ್ ವರೆಗೆ ಸಮುದ್ರ ಅಲೆಗಳು ಏರಿಕೆಯಾಗುವ  ಸಾಧ್ಯತೆ ಇದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ