ಮಂಗಳೂರು ಸಹಾಯಕ ಆಯುಕ್ತ ಡಾ. ರೇಣುಕಾ ಪ್ರಸಾದ್ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಗ್ರಾಮ ಕರಣಿಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಎ.ಸಿ. ರೇಣುಕಾ ಪ್ರಸಾದ್ ಅವರ ಕಾರ್ಯದಕ್ಷತೆ, ಕರ್ತವ್ಯ ಪ್ರಜ್ಞೆ ಹಾಗೂ ಕ್ರಿಯಾಶೀಲತೆ ಎಲ್ಲರಿಗೂ ಮಾದರಿಯಾಗಿದ್ದು, ಸರಕಾರಿ ಕೆಲಸ ದೇವರ ಕೆಲಸ ಎಂದು ನಂಬಿಕೊಂಡು ಕರ್ತವ್ಯ ನಿರ್ವಹಿಸಿ ಸಾರ್ವಜನಿಕ ವಲಯದಲ್ಲಿ ಜನಸ್ನೇಹಿಯಾಗಿದ್ದಾರೆ ಎಂದು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಅಭಿನಂದಿಸಿದರು.
ಉಪ ತಹಶೀಲ್ದಾರ್ ಗಳಾದ ರಾಜೇಶ್ ನಾಯ್ಕ್, ಸೀತಾರಾಮ, ಗ್ರೆಟ್ಟಾ ಮಸ್ಕರೇಂಜಸ್, ಕಂದಾಯ ನಿರೀಕ್ಷಕ ದಿವಾಕರ್ ಮುಗುಳಿಯ, ನವೀನ್ ಬೆಂಜನಪದವು ಮತ್ತಿತರರು ಶುಭ ಹಾರೈಸಿದರು. ಗ್ರಾಮಕರಣಿಕರು, ತಾಲೂಕು ಕಚೇರಿ ಸಿಬ್ಬಂದಿಗಳು ಹಾಗೂ ಗ್ರಾಮ ಸಹಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…