ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಪಾಣೆಮಂಗಳೂರು ಪೌರ ಸಮಿತಿ ಸಂಚಾಲಕ ಯು. ಮುಸ್ತಫಾ ಆಲಡ್ಕ ಅವರು ನೇಮಕಗೊಂಡಿದ್ದಾರೆ.
ಜಾಹೀರಾತು
ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ನಿರ್ದೇಶನದ ಮೇರೆಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಈ ನೇಮಕ ಆದೇಶ ಹೊರಡಿಸಿದ್ದಾರೆ. ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ಅಬ್ಬಾಸ್ ಅಲಿ ಅವರು ಮುಸ್ತಫಾ ಅವರಿಗೆ ಆದೇಶ ಪತ್ರ ಹಸ್ತಾಂತರಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶರೀಫ್ ಅಲಾಡಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹೇಶ್ ನಾಯಕ್ ಖಂಡಿಗ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮುಸ್ತಫಾ ಆಲಡ್ಕ"