ಬಂಟ್ವಾಳ

ಬಂಟ್ವಾಳ ಸರಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಮಾರ್ಚ್ 22ರಂದು

ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿರುವ ವಿಶಿಷ್ಟ ಹಸಿರು ಸಭಾಂಗಣದಲ್ಲಿ ಮಾರ್ಚ್ 22ರಂದು ಎಕ್ಸ್ಪಾಂಡಿಂಗ್ ದ ಹೊರೈಝನ್ಸ್ ಅಫ್ ನಾಲೆಜ್: ಆನ್ ಇಂಟರ್ ಡಿಸಿಪ್ಲಿನರಿ ಅಪ್ರೋಚ್ ಎಂಬ ವಿಷಯದ ಬಗ್ಗೆ ಒಂದು ದಿನದ ರಾಷ್ಟ್ರಮಟ್ಟದ ವಿಚಾರಸಂಕಿರಣ ನಡೆಯಲಿದೆ.

ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೊ. ಮಹೇಶ್ ರಾವ್ ಅವರು ವಿಚಾರ ಸಂಕಿರಣವನ್ನು ಉದ್ಘಾಟನೆ ಮಾಡಲಿದ್ದು ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಝೇವಿಯರ್ ಡಿ ಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಪಿ. ಎಸ್. ಎಡಪಡಿತ್ತಾಯ ಹಾಗೂ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕರಾದ ಪ್ರೊ. ಬಿ. ಸುರೇಂದ್ರ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಪೂರ್ವಾಹ್ನದ ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ. ಅಪರಾಹ್ನದ ಪ್ರಬಂಧ ಮಂಡನೆಯ ಗೊಷ್ಠಿಗಳ ಅಧ್ಯಕ್ಷರಾಗಿ ಪುತ್ತೂರಿನ ಡಾ. ನರೇಂದ್ರ ರೈ ದೇರ್ಲ, ಉಡುಪಿಯಿಂದ ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಮಂಜೇಶ್ವರದ ಡಾ. ಸಚೀಂದ್ರನ್ ಭಾಗವಹಿಸಲಿದ್ದಾರೆ. ವಿವಿಧ ಕಾಲೇಜುಗಳ ಉಪನ್ಯಾಸಕರು ಗೋಷ್ಠಿಗಳಲ್ಲಿ ಭಾಗವಹಿಸಿ ಪ್ರಬಂಧ ಮಂಡಿಸಲಿದ್ದಾರೆ ಎಂದು ಪ್ರಾಂಶುಪಾಲ ಡಾ. ಗಿರೀಶ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ