ಕಲ್ಲಡ್ಕ-ಕಾಂಞಗಾಡ್ ಅಂತಾರಾಜ್ಯ ಹೆದ್ದಾರಿಯ ವಿಟ್ಲದ ಕಾಶಿಮಠ ತಿರುವಿನಲ್ಲಿ ಗುರುವಾರ ರಾತ್ರಿ ಬೈಕೊಂದು ಸವಾರನ ನಿಯಂತ್ರಣ ಕಳೆದು ರಸ್ತೆ ಬದಿಯ ಎಚ್ಚರಿಕೆ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡಿದ್ದಾರೆ.
ಅಡ್ಯನಡ್ಕ ನಿವಾಸಿ ತಿಲಕ್(26) ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಚಾಲಕ ಧರ್ಮೇಂದ್ರ(25) ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೈಕಿನಲ್ಲಿ ವಿಟ್ಲ ಕಡೆಯಿಂದ ಅಡ್ಯನಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಕಾಶಿಮಠ ಅಪಾಯಕಾರಿ ತಿರುವಿನಲ್ಲಿ ಸವಾರ ನಿಯಂತ್ರಣ ಕಳೆದು ರಸ್ತೆ ಬದಿಯ ಎಚ್ಚರಿಕೆಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದೆ. ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಸಹಸವಾರ ತಿಲಕ್ ಸೂಚನಾ ಫಲಕದ ಪಕ್ಕದಲ್ಲಿದ್ದ ಹೊಂಡಕ್ಕೆ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಫ್ರೆಂಡ್ಸ್ ವಿಟ್ಲ ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ತಿಲಕ್ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಕೆಲವು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ಲಾರಿಯೊಂದು ಬೈಕ್ ಸವಾರ ಮೇಲೆ ಹರಿದು ನಿವೃತ್ತ ಸೈನಿಕರೊಬ್ಬರು ಮೃತಪಟ್ಟಿದ್ದರು. ಎರಡು ದಿನಗಳ ಹಿಂದೆ ಈ ಸ್ಥಳದಲ್ಲಿ ಸೂಚನಾ ಫಲಕ ಅಳವಡಿಸಲಾಗಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಪ್ರಕಾಶ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…