ಬಂಟ್ವಾಳ

ಮಾ.26, 27ಕ್ಕೆ ಬಂಟ್ವಾಳಕ್ಕೆ ರೋಟರಿ ಗವರ್ನರ್ ಭೇಟಿ

ರೋಟರಿ ಕ್ಲಬ್‌ನ 50ನೆ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಮಾ. 26, 27 ರಂದು ಬೆಳಿಗ್ಗೆ 10.30ಕ್ಕೆ ರೋಟರಿ ಕ್ಲಬ್ ಬಂಟ್ವಾಳ (ರೋಟರಿ ಜಿಲ್ಲೆ 3181) ನೂತನ ಕಟ್ಟಡದ ಉದ್ಘಾಟನೆ ಹಾಗೂ ವಿವಿಧ ಸಾಮಾಜಿಕ ಕಾರ್ಯಕ್ರಮ ಬಿ.ಸಿ.ರೋಡ್ ರೋಟರಿ ಕಚೇರಿಯಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್‌ನ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಹೇಳಿದ್ದಾರೆ.

ಜಾಹೀರಾತು

ಗುರುವಾರ ಸಂಜೆ ಬಿ.ಸಿ.ರೋಡ್ ಪ್ರೆಸ್‌ ಕ್ಲಬ್‌ನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ರೋಟರಿ ಜಿಲ್ಲಾ ಗವರ್ನರ್ ಎಂ.ಎಂ. ಸುರೇಶ್  ಚಂಗಪ್ಪ ಅವರು ಕಟ್ಟಡವನ್ನು ಉದ್ಘಾಟಿಸುವರು.

ಮುಂದಿನ ಸಾಲಿನ ನಿಯೋಜಿತ ಗವರ್ನರ್ ರೋಹಿನಾಥ್ ಪಾದೆ, ವಲಯ-4ರ ಅಸಿಸ್ಟೆಂಟ್ ಗವರ್ನರ್ ಎಂ.ಎಂ.ಕುಮಾರ್ ಅವರು ಉಪಸ್ಥಿತರಿರುವರು ಎಂದರು.

ಮಾ. 26ರಂದು ನವೀಕರಣಗೊಳಿಸಿದ ಮಯ್ಯರಬೈಲು ಬೋರುಗುಡ್ಡೆ ಅಂಗವಾಗಿ ಕೇಂದ್ರ ಉದ್ಘಾಟನೆ, ಶಂಭೂರ್ ಗ್ರಾಮದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ವಿದ್ಯುತ್ ವ್ಯವಸ್ಥೆಯಿಲ್ಲದೆ 9 ಮನೆಗಳಿಗೆ ಉಚಿತ ಸೌರ ವಿದ್ಯುತ್ ದೀಪ ಅಳವಡಿಸಿ ಉದ್ಘಾಟನಾ ಕಾಯಕ್ರಮ ನಡೆಯಲಿದೆ. ಮಾ. 27ರಂದು ಶಂಭೂರು ಶಾಲಾ ಕಟ್ಟಡ ಉದ್ಘಾಟನೆ, ಮಣಿನಾಲ್ಕೂರು ಸರಕಾರಿ ಶಾಲೆಯಲ್ಲಿ ನಿರ್ಮಾಣಗೊಂಡಿರುವ ಕಲಾಮಂದಿರದ ಉದ್ಘಾಟನೆ, ನವೀಕರಣಗೊಳಿಸಿದ ಮಣಿನಾಲ್ಕೂರು ಬಡಕೊಟ್ಟು ಅಂಗನವಾಡಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಕಟ್ಟಡ ಸಮಿತಿ ಅಧ್ಯಕ್ಷ ಎನ್.ಪ್ರಕಾಶ್ ಕಾರಂತ್, ಕಾರ್ಯದರ್ಶಿ ಕೆ.ನಾರಾಯಣ ಹೆಗ್ಡೆ, ಖಜಾಂಚಿ  ರಿತೇಶ್ ಬಾಳಿಗಾ, ರಾಜೇಶ್ ಸುವರ್ಣ, ನಿಯೋಜಿತ ಅಧ್ಯಕ್ಷ ಮಂಜುನಾಥ್ ಆಚಾರ್ಯ, ಪ್ರಕಾಶ್ ಬಾಳಿಗ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ