ಬಂಟ್ವಾಳ ತಾಲೂಕಿನ ಮಿನಿ ವಿಧಾನ ಸೌಧ (ತಾಲೂಕು ಕಚೇರಿ)ದಲ್ಲಿ ವಿವಿಧ ಅವಶ್ಯಕತೆಗಳಿಗಾಗಿ ಬರುವ ಸಾರ್ವಜನಿಕರ ಅಗತ್ಯ ಕೆಲಸಗಳ ವಿಳಂಬ ಹಾಗೂ ತಾಲೂಕು ಕಚೇರಿಯ ಅವ್ಯವಸ್ಥೆಯ ವಿರುದ್ಧ ಮಾ. 23ರಂದು ಸಂಜೆ 4.30 ಕ್ಕೆ ಎಸ್‌ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದೆ.
ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಬೇಕಾದ ಆಧಾರ್‌ಕಾರ್ಡ್, ಆರ್‌ಟಿಇ ಅರ್ಜಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಣೆಯಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಲ್ಲದೆ ಕಚೇರಿ ಆವರಣದಲ್ಲಿ ಮದ್ಯವರ್ತಿಗಳು ಹೆಚ್ಚಾಗಿದೆ. ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿದ್ದು, ಸಾರ್ವಜನಿಕರಿಗೆ ಅಗತ್ಯ ಕೆಲಸಗಳು ಅನಗತ್ಯ ವಿಳಂಬವಾಗುತ್ತಿದೆ. ಸಾರ್ವಜನಿಕರು ಮಿನಿ ವಿಧಾನಸೌದದಲ್ಲಿ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರೂ, ಸಾರ್ವಜನಿಕರ ಯಾವುದೇ ಕೆಲಸಗಳು ಆಗುತ್ತಿಲ್ಲ. ಈ ಬಗ್ಗೆ ಉಸ್ತುವಾರಿ ಸಚಿವರು ಗಮನ ಹರಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಡಿಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್.ಎಚ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ