ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಬೈಂದೂರಿಗೆ ವರ್ಗಾವಣೆ ಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಪ್ರಭಾರ ನೆಲೆಯಲ್ಲಿ ಜೀನ್ ಮೇರಿ ತೌರೋ ಅಧಿಕಾರ ಸ್ವೀಕರಿಸಿದರು.
ಶುಕ್ರವಾರ ಸಂಜೆ ಮಿನಿ ವಿಧಾನ ಸೌಧದಲ್ಲಿ ಕರ್ತವ್ಯಕ್ಕೆ ಹಾಜರಾದ ಜೀನ್ ಮೇರಿ ತೌರೋ ಅವರಿಗೆ ತಾಲೂಕು ಕಚೇರಿ ಸಿಬ್ಬಂದಿ ವರ್ಗ ಸ್ವಾಗತಿಸಿತು. ಉಪತಹಶೀಲ್ದಾರ್ ಗಳಾದ ರಾಜೇಶ್ ನಾಯ್ಕ್, ಗ್ರೆಟ್ಟಾ ಮಸ್ಕರೇಂಜಸ್, ಸೀತಾರಾಮ ನೂತನ ತಹಶೀಲ್ದಾರರಿಗೆ ಶುಭಾಶಯ ಕೋರಿದರು. ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ಆಹಾರ ಶಾಖೆಯ ಶ್ರೀನಿವಾಸ್ ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ,ಸುಧಾ, ದಾಕ್ಷಾಯಿಣಿ, ವಿದ್ಯಾ ಮೋರೆ, ಮಹೇಂದ್ರ, ರೇಖಾ, ವಿನಯ ನಾಗರಾಜ, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…