ಬಂಟ್ವಾಳ

ದೇವಸ್ಥಾನಕ್ಕೆ ನೀಡಿದ ದೇಣಿಗೆ ಸದ್ವಿನಿಯೋಗ: ಜಗನ್ನಿವಾಸ ರಾವ್

ದೇವಸ್ಥಾನದ ಹುಂಡಿಗೆ ಹಾಕಿದ ಹಣ ಸದ್ವಿನಿಯೋಗವಾಗುತ್ತದೆ, ಅದು ದೇವಸ್ಥಾನಗಳು, ಧಾರ್ಮಿಕ ಕಾರ್ಯಕ್ಕೇ ವಿನಿಯೋಗವಾಗುತ್ತದೆ ಎಂದು ರಾಜ್ಯ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಿವಾಸ ರಾವ್ ಹೇಳಿದ್ದಾರೆ.

ಜಾಹೀರಾತು

ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾದದಲ್ಲಿ ಶ್ರೀ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ದೇವಸ್ಥಾನದ ಅಭಿವೃದ್ಧಿಗೆ ಹುಂಡಿಗೆ ಬಂದ ಹಣವನ್ನು ವಿನಿಯೋಗಿಸಲಾಗುವುದು. ಎ ಗ್ರೇಡ್ ದೇವಸ್ಥಾನಗಳಿಂದ ಶೇ.೧೦, ಬಿ ಗ್ರೇಡ್ ದೇವಸ್ಥಾನಗಳಿಂದ ಶೇ.೫ರಷ್ಟು ಹಣವನ್ನು ಸರಕಾರಕ್ಕೆ ನೀಡಲಾಗುತ್ತದೆಯೇ ಹೊರತು, ಉಳಿದೆಲ್ಲ ಹಣವೂ ದೇವಸ್ಥಾನದ ಹೆಸರಲ್ಲಿ ಬ್ಯಾಂಕ್ ಖಾತೆಯಲ್ಲಿರುತ್ತದೆ. ಅದನ್ನು ವಿನಿಯೋಗಿಸುವಾಗ ಮಾತ್ರ ಧಾರ್ಮಿಕ ದತ್ತಿ ಇಲಾಖೆ ಅನುಮತಿ ಬೇಕಾಗುತ್ತದೆ ಎಂದರು.

ದೇವಸ್ಥಾನದ ದುಡ್ಡು ದುರುಪಯೋಗವಾಗುತ್ತಿದೆ ಎಂಬ ಅನುಮಾನಗಳಿದ್ದಲ್ಲಿ ಮಾಹಿತಿ ಹಕ್ಕಿನಲ್ಲಿ ಕೇಳಿ. ಅದನ್ನು ಬಿಟ್ಟು ಅಪಪ್ರಚಾರ ಮಾಡುವುದು ಸಲ್ಲದು ಎಂದು ಅವರು ಹೇಳಿದರು.

ಜಾಹೀರಾತು

ಆಶೀರ್ವಚನ ನೀಡಿದ ಹೊಸ್ಮಾರು ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ, ಇಂದು ದೇವಾಲಯಗಳಲ್ಲಿ ಶಿವಾಲಯಗಳು ದೇಶದಾದ್ಯಂತ ಅಧಿಕವಿವೆ. ಶಿವಸಾನಿಧ್ಯಗಳ ಮೂಲಕ ಜನರು ದುಃಖ ದುಮ್ಮಾನಗಳನ್ನು ದೇವರಲ್ಲಿ ಅರಿಕೆ ಮಾಡಿಕೊಳ್ಳುತ್ತಾರೆ. ಭಕ್ತರಿಗೆ ನೆಮ್ಮದಿ ನೀಡುವ ಕೆಲಸ ದೇವಳಗಳಿಂದ ಆಗಲಿ ಎಂದು ಹಾರೈಸಿದರು.

ಮುಖ್ಯ ಅತಿಥಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮಾತನಾಡಿ, ಸಚಿವ ರಮಾನಾಥ ರೈ ಅವರು ಅರಣ್ಯ ಸಚಿವರಾದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಕ್ರಮಗಳಿಗೆ ಶಕ್ತಿ ಬಂದಿದೆ. ಸಚಿವರ ನೆರವಿನಿಂದ ಶ್ರೀಮಂತವಾಗಿ ವೈಭವಯುತವಾಗಿ ದೇವಸ್ಥಾನಗಳು ಅಭಿವೃದ್ಧಿ ಹೊಂದುತ್ತಿವೆ ಎಂದು ಹೇಳಿದರು.

ಹೈಕೋರ್ಟ್ ವಕೀಲರಾದ ಜಗನ್ನಾಥ ಆಳ್ವ ಮಿತ್ತಳಿಕೆ ಮಾತನಾಡಿ, ಇಂದು ಬ್ರಹ್ಮಕಲಶೋತ್ಸವಕ್ಕೆ ಬರುವ ಭಕ್ತರು ಬಳಿಕವೂ ದೇವಸ್ಥಾನಕ್ಕೆ ಆಗಮಿಸಬೇಕು. ದೇವಸ್ಥಾನಗಳ ಉಳಿವಿಗೆ ಭಕ್ತರು, ಆಡಳಿತ ಸಮಿತಿಯವರ ಪಾತ್ರ ಪ್ರಮುಖ ಎಂದರು.

ಜಾಹೀರಾತು

ಸಭಾಧ್ಯಕ್ಷತೆಯನ್ನು ವಹಿಸಿದ್ದ ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ ಮಾತನಾಡಿ, ದೇವಸ್ಥಾನ ಅಭಿವೃದ್ಧಿ ಹೊಂದಲು ಊರವರ ಸಹಕಾರ ಬಹುಮುಖ್ಯ. ಅದರಲ್ಲೂ ವಿಶೇಷವಾಗಿ ಮಹಿಳೆಯರು ಕಾರ್ಯಕ್ರಮದುದ್ದಕ್ಕೂ ಆಗಮಿಸಿ, ಸಹಕಾರ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸುರತ್ಕಲ್ ಉದ್ಯಮಿ ಸತೀಶ್ ಮುಚ್ಚೂರು, ಅನಂತಾಡಿ ಗ್ರಾಪಂ ಅಧ್ಯಕ್ಷ ಸನತ್ ಕುಮಾರ್ ರೈ, ಹಿರಿಯರಾದ ರಾಮಚಂದ್ರ ಬನ್ನಿಂತಾಯ, ಪ್ರಸನ್ನ ಕಾಮತ್ ಕಡೆಕಾನ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಡಾ.ವಸಂತ ನಿಟಿಲಾಪುರ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೂ ಮುನ್ನ ನಾನಾ ತಾಂತ್ರಿಕ, ವೈದಿಕ ಕಾರ್ಯಕ್ರಮಗಳು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಬರಿಮಾರು, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು, ಪ್ರಧಾನ ಅರ್ಚಕ ನಾರಾಯಣ ರಾವ್ ಕಾರಂತ, ಬ್ರಹ್ಮಕಲಶ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಕಾರ್ಯದರ್ಶಿ ಡಾ. ವಸಂತ ಎನ್. ನಿಟಿಲಾಪುರ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ