ಮುಂಬರುವ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಅಕ್ರಮ ಮದ್ಯ/ಬೀರ್ ತಯಾರಿಕೆ/ದಾಸ್ತಾನು/ಸಾಗಾಣಿಕೆ ಬಗ್ಗೆ ಸಾರ್ವಜನಿಕರಿಂದ ನೀಡಲಾಗುವ ದೂರುಗಳನ್ನು ಸ್ವೀಕರಿಸಲು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಸಲು ಸಹಕಾರಿ ಆಗುವಂತೆ ನೋಡಿಕೊಳ್ಳಲು ಅಬಕಾರಿ ಇಲಾಖೆಯ ಜಿಲ್ಲಾ ಕೇಂದ್ರ ಕಚೇರಿಯಲ್ಲಿ/ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್‍ಗಳನ್ನು ತೆರೆಯಲಾಗಿದ್ದು, ಕಂಟ್ರೋಲ್ ರೂಮ್ ಗಳು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿದೆ.
ಸಾರ್ವಜನಿಕರು ಅಬಕಾರಿ ಅಕ್ರಮಗಳ ಬಗ್ಗೆ ಮಾಹಿತಿ ನೀಡಬಹುದಾದ ಕಂಟ್ರೋಲ್ ರೂಮ್‍ಗಳ ದೂರವಾಣಿ ಸಂಖ್ಯೆಗಳ ವಿವರ ಇಂತಿವೆ : ಅಬಕಾರಿ ಉಪ ಆಯುಕ್ತರ ಕಚೇರಿ, ಅಬಕಾರಿ , ಮೇರಿಹಿಲ್,ಮಂಗಳೂರು ಟೋಲ್ ಫ್ರೀ ಸಂಖ್ಯೆ -18004253872, ಅಬಕಾರಿ ನಿರೀಕ್ಷಕರ ಕಚೇರಿ ಬಂಟ್ವಾಳ -08255-232726, ಅಬಕಾರಿ ನಿರೀಕ್ಷಕರ ಕಚೇರಿ ಬೆಳ್ತಂಗಡಿ -08256-234757, ಅಬಕಾರಿ ನಿರಿಕ್ಷಕರ ಕಚೇರಿ ಪುತ್ತೂರು -08251-236481, ಅಬಕಾರಿ ನಿರೀಕ್ಷಕರ ಕಚೇರಿ ಸುಳ್ಯ -08257-231309ನ್ನು ಸಂಪರ್ಕಿಸಲು ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.