www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಧರ್ಮ, ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳು. ನಿಸ್ವಾರ್ಥ ಸೇವೆಯಿಂದ ಕಾರ್ಯಾರ್ಥ ಸಿದ್ಧಿಯಾಗುತ್ತದೆ. ಯುವಶಕ್ತಿ ತ್ಯಾಗಪೂರ್ಣವಾದ ಸೇವೆಯನ್ನು ನೀಡುತ್ತಿರುವುದನ್ನು ಇಲ್ಲಿ ಕಾಣುತ್ತೇವೆ. ಇದರಿಂದ ಪರಿಪೂರ್ಣವಾದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಮೊಗರ್ನಾಡು ಸಾವಿರ ಸೀಮೆಯ ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಅಂಗವಾಗಿ ಭಾನುವಾರ ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ ಆಳ್ವ, ನಮ್ಮಲ್ಲಿ ಧಾರ್ಮಿಕ ಪ್ರಜ್ಞೆ ಗಟ್ಟಿಯಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರೂ ಆಗಿರುವ ರಾಜ್ಯ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ನಿಟಿಲಾಕ್ಷ ಸದಾಶಿವ ದೇವರ ಅನುಗ್ರಹದಿಂದ ಮೊಗರನಾಡು ಸೀಮೆಯಲ್ಲಿ ಶಾಂತಿ ನೆಮ್ಮದಿ ನೆಲೆಸುವಂತಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಾಗಪಾತ್ರಿ ಕಕ್ಕುಂಜೆ ನಾಗಾನಂದ ವಾಸುದೇವ ಆಚಾರ್ಯ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಮ್ಮುಂಜೆಗುತ್ತು ದೇವದಾಸ ಹೆಗ್ಡೆ, ಸರಪಾಡಿ ಶರಭೇಶ್ವರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ ನಾಯ್ಕ, ಬಜಾರ್ ಬೀಡಿ ಮಾಲೀಕ ಎಸ್.ಎಂ.ಗೋಪಾಲ ಆಚಾರ್ಯ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಸ್ಥಳೀಯ ಗಣ್ಯರಾದ ರಾಮಚಂದ್ರ ಬನ್ನಿಂತಾಯ ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನ್ಯಾಯವಾದಿ ಅಶೋಕ್ ಕುಮಾರ್ ಬದಿಮಾರು ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಧರ್ಮ, ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ"