ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಎನ್ ಲಕ್ಷ್ಮೀನಾರಾಯಣ ಮಲ್ಯ ಅವರನ್ನು ಅಭಿನಂದಿಸಲಾಯಿತು.
ಶಾಲಾ ಸಂಚಾಲಕರಾದ ಭಾಮಿ ವಿಠ್ಠಲದಾಸ್ ಶೆಣೈ ಮುಖ್ಯ ಅತಿಥಿಯಾಗಿದ್ದರು. ಶಾಲಾ ಅಭಿವೃದ್ಧಿ ಮಂಡಳಿ ಸದಸ್ಯರಾದ ಡಾ.ಮಹೇಶ್ ಭಟ್, ಹರೀಶ್ ಮಾಂಬಾಡಿ, ಪ್ರಾಂಶುಪಾಲೆ ರಮಾಶಂಕರ್ ಸಿ ಕಾರ್‍ಯಕ್ರಮಲ್ಲಿ ಪಾಲ್ಗೊಂಡರು.
ಶಾಲಾಭಿವೃದ್ಧಿಗೆ ಹಲವು ರೀತಿಯಲ್ಲಿ ಸಹಕರಿಸಿದ ಎನ್ ಲಕ್ಷ್ಮೀನಾರಾಯಣ ಮಲ್ಯ ಅವರನ್ನು ಶಾಲು ಹೊದಿಸಿ, ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಪ್ರಾಂಶುಪಾಲೆ ರಮಾಶಂಕರ್ ಸಿ ಅಭಿನಂದನಾ ಪತ್ರ ವಾಚಿಸಿದರು. ಚಂದ್ರಿಕಾ ಪಿ ಸ್ವಾಗತಿಸಿ, ಕೇಶವತಿ ವಂದಿಸಿದರು. ಉಷಾ ಬಿ ಕಾರ್‍ಯಕ್ರಮ ನಿರ್ವಹಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷರಿಗೆ ಅಭಿನಂದನೆ"