www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಮಾರ್ಚ್ 21ರಿಂದ ಆರಂಭಗೊಂಡಿರುವ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪ ಮೊಗರನಾಡು ಸಾವಿರ ಸೀಮೆಯ
ಶ್ರೀ ಕ್ಷೇತ್ರ ನಿಟಿಲಾಪುರದ ನಿಟಿಲಾಕ್ಷ ಸದಾಶಿವ ದೇವಸ್ಥಾನದ ನವೀಕರಣಗೊಂಡ ಪ್ರಾಸಾದದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೆಳಗ್ಗೆ ಸೇರಿದ್ದ ಭಕ್ತರ ಸಮ್ಮುಖ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ನಡೆಯಿತು.
ಬೆಳಗ್ಗೆ ಗಣಪತಿ ಹೋಮ, ಕವಾಟೋದ್ಘಾಟನೆ, ತೈಲಾಭ್ಯಂಗನ, ಉಷಃಪೂಜೆ ನಡೆದು ಪರಿಕಲಶಾಭಿಷೇಕ ಕಾರ್ಯಕ್ರಮ ನಡೆಯಿತು. ಅದಾದ ಬಳಿಕ ಬ್ರಹ್ಮಕಲಶಾಭಿಷೇಕ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಈ ಸಂದರ್ಭ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಚಿವ ಬಿ.ರಮಾನಾಥ ರೈ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಬರಿಮಾರು, ಪ್ರಧಾನ ಅರ್ಚಕ ನಾರಾಯಣ ರಾವ್ ಕಾರಂತ, ಜೀರ್ಣೋದ್ಧಾರ ಸಮಿತಿ ಸಹಾಧ್ಯಕ್ಷ ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಕೆ.ಪದ್ಮನಾಭ ರೈ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಪ್ರಮುಖರಾದ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿ ಸಹಿತ ಹಲವು ಗಣ್ಯರು, ಉದ್ಯಮಿಗಳು, ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.