ಕಲ್ಲಡ್ಕ : ವಿವೇಕಾನಂದ ಮತ್ತು ಶ್ರೀರಾಮ ವರ್ತುಲಗಳ ಶೈಕ್ಷಣಿಕ ಕಾರ್‍ಯಾಗಾರ


ಶಿಕ್ಷಕ ಮಗುವಿಗೆ ಕೇವಲ ವಿಷಯ ಹೇರುವಕಾರ್ಯ ನಡೆಸದೇ ಮಗುವಿನ ಅಂತರಂಗಅರಿತು ಮಗುವಿಗೆ ಬದುಕಿನ ದಿಕ್ಕು ತೋರಿಸುವ ಕಾರ್ಯ ನಡೆಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ ವಿವೇಕಾನಂದ ಮತ್ತು ಶ್ರೀರಾಮ ವರ್ತುಲಗಳ ಶೈಕ್ಷಣಿಕ ಕಾರ್‍ಯಾಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡಿದರು.

ಭಾರತೀಯ ಸಂಸ್ಕೃತಿ ಪ್ರಪಂಚದ ಉಳಿದ ಸಂಸ್ಕೃತಿಗಿಂತ ವಿಭಿನ್ನವಾಗಿದೆ. ಭಾರತೀಯ ಸಂಸ್ಕೃತಿಯು ಪ್ರಪಂಚದ ಕೇವಲ ಬಾಹ್ಯವಿಚಾರಗಳ ಬಗ್ಗೆ ಯೋಚಿಸದೇ ಆಂತರಿಕ ಸತ್ಯದ ಹುಡುಕಾಟ ನಡೆಸುತ್ತದೆ. ಆದುದರಿಂದ ನಮ್ಮ ಸಂಸ್ಕೃತಿ ನಿತ್ಯ ನಿರಂತರ ಹರಿಯುವಿಕೆಯ ಪ್ರಕ್ರಿಯೆಯನ್ನು ಹೊಂದಿದೆ ಎಂದು ಅವರು ಹೇಳಿದರು.

ಜಾಹೀರಾತು

ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್, ಶ್ರೀರಾಮ ಪ್ರೌಢಶಾಲಾ ಮುಖ್ಯಶಿಕ್ಷಕಿ ವಸಂತಿ, ಶ್ರೀರಾಮ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ರವಿರಾಜ್ ಕಣಂತೂರು, ಶ್ರೀದೇವಿ ಪ್ರೌಢಶಾಲೆ ಪುಣಚದ ಶಿಕ್ಷಕಿ ಗಂಗಾ ಮಾತಾಜಿ, ಶ್ರೀದೇವಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಲೋಕೇಶ್, ವಿವೇಕಾನಂದ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ನಳಿನಿ ವಾಗ್ಲೆ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಹಿರಿಯ ಶಿಕ್ಷಕಿ ಪುಷ್ಪಲತಾ, ಸಂಪನ್ಮೂಲ ವ್ಯಕ್ತಿಯಾದ ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಲೋಕಯ್ಯ ಡಿ ಉಪಸ್ಥಿತರಿದ್ದರು.

ಶ್ರೀರಾಮ ಪ್ರೌಢಶಾಲಾ ಕಲಾಶಿಕ್ಷಕ ಜಿನ್ನಪ್ಪ ಕಾರ್ಯಕ್ರಮ ನಿರೂಪಿಸಿದರು. ಕಾರ್‍ಯಾಗಾರ ಸಹಸಂಯೋಜಕರಾದ ಚಂದ್ರಶೇಖರ ಸ್ವಾಗತಿಸಿ, ಶ್ರೀರಾಮ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಗೋಪಾಲ್ ವಂದಿಸಿದರು. ಲೋಕಯ್ಯ ಡಿ, ಪ್ರದೀಪ್, ಗಂಗಾಧರ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.
ಕಾರ್‍ಯಾಗಾರದಲ್ಲಿ ಶ್ರೀರಾಮ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ, ಶ್ರೀದೇವಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಪುಣಚ, ವಿವೇಕಾನಂದ ಆಂಗ್ಲಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಭಾಗವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಲ್ಲಡ್ಕ : ವಿವೇಕಾನಂದ ಮತ್ತು ಶ್ರೀರಾಮ ವರ್ತುಲಗಳ ಶೈಕ್ಷಣಿಕ ಕಾರ್‍ಯಾಗಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*