ಮಿತ್ತಬೈಲು ಉರೂಸ್ – ನೇರ್ಚೆ ಏ.5ರಿಂದ 15ವರೆಗೆ

 

ಶೈಖ್ ವಲಿಯುಲ್ಲಾಹಿ (.ಸಿ.) ಅವರ ಹೆಸರಿನಲ್ಲಿ ಮೂರು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವಮಿತ್ತಬೈಲು ಉರೂಸ್ನೇರ್ಚೆಯು .5ರಿಂದ ೧೫ರವರೆಗೆ ಬಿ.ಸಿ.ರೋಡ್ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಹಬೀಬುಲ್ಲಾ ಹೇಳಿದ್ದಾರೆ.

ಜಾಹೀರಾತು

ಶನಿವಾರ ಸಂಜೆ ಬಿ.ಸಿ.ರೋಡಿನ ಪ್ರಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, . 5ರಂದು ರಾತ್ರಿ 9ಕ್ಕೆ ಸಮಸ್ತ ಕೇರಳ ಜಂಇಯ್ಯತುಲ್ ಉಲೆಮಾದ ಪ್ರಧಾನ ಕಾರ್ಯದರ್ಶಿ ಶೈಖುನಾ ಆಲಿಕುಟ್ಟಿ ಉಸ್ತಾದ್ ಅವರು ದುವಾಃ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮಸ್ತ ಕೇರಳ ಜಂಇಯ್ಯತುಲ್ ಉಲೆಮಾ ಉಪಾಧ್ಯಕ್ಷ ಕೆ.ಪಿ.ಅಬ್ದುಲ್ ಜಬ್ಬಾರ್ ಉಸ್ತಾದ್ ಅವರು ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

ಪ್ರತೀದಿನ ರಾತ್ರಿ 9.30 ರಿಂದ ಪ್ರಸಿದ್ಧ ಧಾರ್ಮಿಕ ವಿದ್ವಾಂಸರಿಂದ ಧಾರ್ಮಿಕ ಮತಪ್ರಭಾಷಣ ನಡೆಯಲಿದೆ. .15 ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು, ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಅಧ್ಯಕ್ಷ ಅಸ್ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್ ಭಾಗವಹಿಸುವರು. ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ತನ್ವೀರ್ ಸೇಠ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಅಬ್ದುಲ್ ಗಫೂರ್, ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್, ಬಿ.ಕೆ.ಹರಿಪ್ರಸಾದ್, ಮಾಜಿ ಮೇಯರ್ ಅಶ್ರಫ್, ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕಣಚೂರು ಮೋನು ಮತ್ತಿತರರು ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಬ್ದುಲ್ ಸಲಾಂ, ಮುಹಮ್ಮದ್ ಅದ್ಯಾಡಿ, ಮುಹಮ್ಮದ್ ಅಲಿ, ಇಬ್ರಾಹಿಂ, ಅಶ್ರಫ್, ಸಲೀಂ, ಶಾಹುಲ್ ಹಮೀದ್, ಅಬೂಬಕರ್ ಮಠ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಮಿತ್ತಬೈಲು ಉರೂಸ್ – ನೇರ್ಚೆ ಏ.5ರಿಂದ 15ವರೆಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*