ಬಂಟ್ವಾಳ

ರೋಟರಿ ಬಂಟ್ವಾಳ ಸುವರ್ಣ ವರ್ಷಾಚರಣೆಗೆ ಚಾಲನೆ

ರೋಟರಿ ಕ್ಲಬ್ ಬಂಟ್ವಾಳ ಇದರ ಸುವರ್ಣ ವರ್ಷಾಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳಿಗೆ ಮಂಗಳವಾರ ಚಾಲನೆ ನೀಡಲಾಯಿತು. ಕ್ಲಬ್ ನ ಸ್ಥಾಪಕ ಕಾರ್ಯದರ್ಶಿ ಯು.ಡಿ.ನಾಯಕ್ ಅವರು ದೀಪ ಬೆಳಗಿಸುವ ಮೂಲಕ ಸುವರ್ಣ ವರ್ಷಾಚರಣೆಯ ವಿವಿಧ ಜನೋಪಯೋಗಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಜಾಹೀರಾತು

ಕ್ಲಬ್ ನ ಸ್ಥಾಪಕ ಸದಸ್ಯ ದಯಾನಂದ ಕುಡ್ವ ,ಕ್ಲಬ್ ನ ಹಾಲಿ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಗುರುಕೃಪಾ ಸಾಥ್ ನೀಡಿದರು. ಈ ಸಂದರ್ಭ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾರ್ವಜನಿಕರ ಉಪಯೋಗಕ್ಕಾಗಿ ಬಿಸಿ ಮತ್ತು ತಣ್ಣೀರಿನ ಎರಡು ಕುಡಿಯುವ ನೀರಿನ ಘಟಕವನ್ನು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮದಡಿ ತಾಲೂಕಿನ ಸುಮಾರು 50  ಅಂಗನವಾಡಿ ಕೇಂದ್ರಗಳಿಗೆ‌ ರೇಡಿಯೋ ಹಸ್ತಾಂತರಿಸಲಾಯಿತು.ಇದೇ ವೇಳೆ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಬಂಟ್ವಾಳ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಮಂಜುನಾಥ ಆಚಾರ್ಯ ಕ್ಲಬ್ ನ ಸುವರ್ಣ ಮಹೋತ್ಸವ ಪ್ರಯುಕ್ತ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು  ಕಾರ್ಯಗತಗೊಳಿಸಲು ನಿರ್ಧರಿಸಲಾಗಿದ್ದು, ಎಲ್ಲರ ಸಹಕಾರವನ್ನು ಯಾಚಿಸಿದರು.

ಕ್ಲಬ್ ನ ಸುವರ್ಣ ವರ್ಷಾಚರಣೆಯ ಸಂಚಾಲಕ ಡಾ.ರಮೇಶಾನಂದ ಸೋಮಯಾಜಿ, ನಿಯೋಜಿತ ಕಾರ್ಯದರ್ಶಿ  ಶಿವಾನಿ ಬಾಳಿಗಾ, ಕಾರ್ಯದರ್ಶಿ ಕೆ.ನಾರಾಯಣ ಹೆಗ್ಡೆ, ಝೋನಲ್ ಲೆಪ್ಟಿನೆಂಟ್ ಕರುಣಾಕರ ರೈ, ಕೋಶಾಧಿಕಾರಿ ಪ್ರಕಾಶ್ ಬಾಳಿಗಾ, ನಿಕಟಪೂರ್ವ ಅಧ್ಯಕ್ಷ ರಿತೇಶ್ ಬಾಳಿಗಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಗಾಯತ್ರಿ ಆರ್ .ಕಂಬಳಿ, ರಾಮಣ್ಣ ರೈ ಮಾವಂತೂರು, ಜಗದೀಶ್ ರೈ  ಮೊದಲಾದವರು ವೇದಿಕೆಯಲ್ಲಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.