ಸಿದ್ಧಕಟ್ಟೆ ನಲ್ಲೂರಂಗಡಿಯಲ್ಲಿರುವ ಭಗವಾನ್ ೧೦೦೮ ಶ್ರೀ ಅನಂತನಾಥ ಸ್ವಾಮಿ ಬಸದಿಯಲ್ಲಿ ಧಾಮ ಸಂಪ್ರೋಕ್ಷಣೆ ಮತ್ತು ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಗಳು ಏ.7ರಿಂದ 9ವರೆಗೆ ನಡೆಯಲಿದೆ.
ಈ ಸಂದರ್ಭ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಜೈನ ಸಮಾಜ ಮುಖಂಡ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್ ಹೇಳಿದರು.
ಕಾರ್ಕಳ ಜೈನಮಠದ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಪಾವನ ಸಾನಿಧ್ಯ ಮತ್ತು ನೇತೃತ್ವದಲ್ಲಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಮಾರ್ಗದರ್ಶನದಲ್ಲಿ ಜೈನ ಆಗಮೋಕ್ತ ವಿಧಿ ವಿಧಾನಗಳು ನೆರವೇರಲಿವೆ ಎಂದು ಅವರು ಮಾಹಿತಿ ನೀಡಿದರು.
ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ಜೀರ್ಣೋದ್ಧಾರ ಸಮಿತಿ ರಚನೆಯಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುತ್ತಿದೆ ಎಂದ ಅವರು, ಜೈನ ಶ್ರಾವಕಿಯರಿಂದ ೭ರಂದು ಸಾಂಸ್ಕೃತಿಕ ಕಾರ್ಯಕ್ರಮ, ೮ರಂದು ಸಂಜೆ ೮.೩೦ರಿಂದ ಮುನಿರಾಜ ರೆಂಜಾಳ, ನಿರಂಜನ ಅಳಿಯೂರು, ಅಜಿತ್ ಕುಮಾರ್ ಕೊಕ್ರಾಡಿ, ಮಹಾವೀರ ಜೈನ್ ಇಚ್ಲಂಪಾಡಿ, ಅಶ್ವಿನಿ ನಿಟ್ಟೆ ಭಾಗವಹಿಸುವ ಚಾವಡಿ ಚರ್ಚೆ ನಡೆಯಲಿದೆ. ೯ರಂದು ಸೋಮವಾರ ಸಂಜೆ ೬.೩೦ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಕಾರ್ಕಳ ಜೈನಮಠದ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಮತ್ತು ಮೂಡುಬಿದಿರೆ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭಾಗವಹಿಸುವರು ಎಂದು ಅವರು ಮಾಹಿತಿ ನೀಡಿದರು.
ಬಸದಿಯ ಆಡಳಿತ ಮಂಡಳಿ ಅಧ್ಯಕ್ಷ ಭೋಜ ಕೆ. ಸಂಗಬೆಟ್ಟು ಹೊಸಮನೆ, ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಜಯರಾಜ ಹೆಗ್ಡೆ ಪುತ್ತಿಲ, ಕಾರ್ಯದರ್ಶಿ ವಿನಯಚಂದ್ರ ಉಪಸ್ಥಿತರಿದ್ದರು.
Be the first to comment on "ನಲ್ಲೂರಂಗಡಿ ಸಿದ್ಧಕಟ್ಟೆ ಬಸದಿಯಲ್ಲಿ ಧಾಮ ಸಂಪ್ರೋಕ್ಷಣೆ, ಪುನರ್ ಪ್ರತಿಷ್ಠಾ ಮಹೋತ್ಸವ ಏ.7ರಿಂದ"