ರಾಜ್ಯ ವಿಧಾನಸಭಾ ಚುನಾವಣೆ ಪ್ರಯುಕ್ತ ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿ ನಾನಾ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಗುರುವಾರ ನಡೆಯಿತು.
ಚುನಾವಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ರಾಜ್ಯ ಚುನಾವಣಾ ತರಬೇತಿದಾರ ಡಾ. ಜಾನ್ ಪಿಂಟೋ ತರಬೇತಿ ನೀಡಿದರು. ಇವಿಎಂ (ವಿದ್ಯುದ್ಮಾನ ಮತದಾನ ಯಂತ್ರ)ಗಳ ಪ್ರಾತ್ಯಕ್ಷಿಕೆ ಜತೆಗೆ ವಿವಿ ಪ್ಯಾಟ್ ಬಳಕೆಯ ಬಗ್ಗೆ ವಿಶೇಷ ಮಾಹಿತಿ ನೀಡಲಾಯಿತು. ಚುನಾವಣಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಬಸರಿಹಳ್ಳಿ, ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ್ ಜೀನ್ ಮೇರಿ ತಾವ್ರೋ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ನೋಡೆಲ್ ರಾಜಣ್ಣ ಮಾಹಿತಿ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು. ಕ್ಷೇತ್ರ ವ್ಯಾಪ್ತಿಯ 249 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಧಿಕಾರಿ, ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಬಂಟ್ವಾಳ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು , ದಿವಾಕರ ಮುಗುಳ್ಯ ಸಹಕರಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…