ಬಂಟ್ವಾಳ

ಚುನಾವಣೆ: ಅಧಿಕಾರಿಗಳಿಗೆ ತರಬೇತಿ

ರಾಜ್ಯ ವಿಧಾನಸಭಾ ಚುನಾವಣೆ ಪ್ರಯುಕ್ತ ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿ ನಾನಾ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಗುರುವಾರ ನಡೆಯಿತು.

ಜಾಹೀರಾತು

ಚುನಾವಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯಿತಿ  ಅಭಿವೃದ್ಧಿ ಅಧಿಕಾರಿಗಳಿಗೆ  ರಾಜ್ಯ ಚುನಾವಣಾ ತರಬೇತಿದಾರ ಡಾ. ಜಾನ್ ಪಿಂಟೋ ತರಬೇತಿ ನೀಡಿದರು.  ಇವಿಎಂ (ವಿದ್ಯುದ್ಮಾನ ಮತದಾನ ಯಂತ್ರ)ಗಳ ಪ್ರಾತ್ಯಕ್ಷಿಕೆ ಜತೆಗೆ ವಿವಿ ಪ್ಯಾಟ್ ಬಳಕೆಯ ಬಗ್ಗೆ ವಿಶೇಷ ಮಾಹಿತಿ ನೀಡಲಾಯಿತು. ಚುನಾವಣಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಬಸರಿಹಳ್ಳಿ, ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ್ ಜೀನ್ ಮೇರಿ ತಾವ್ರೋ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ನೋಡೆಲ್ ರಾಜಣ್ಣ ಮಾಹಿತಿ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.  ಕ್ಷೇತ್ರ ವ್ಯಾಪ್ತಿಯ 249 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಧಿಕಾರಿ, ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.  ಬಂಟ್ವಾಳ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು , ದಿವಾಕರ ಮುಗುಳ್ಯ ಸಹಕರಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ