ವಾಮದಪದವು ಸರಕಾರಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ವಾಮದಪದವು ಸರಕಾರಿ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಚಂದ್ರಶೇಖರ (19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ಸಕಲೇಶಪುರದ ಕರಗೂರು ನಿವಾಸಿ ಮಂಜಪ್ಪ ಪೂಜಾರಿ ಅವರ ಪುತ್ರ. ಚಂದ್ರಶೇಖರ ಮಧ್ಯಾಹ್ನ ಕಾಲೇಜು ಬಿಟ್ಟು ವಿದ್ಯಾರ್ಥಿ ನಿಲಯಕ್ಕೆ ತೆರಳಿ, ಯಾರೂ ಇಲ್ಲದ ವೇಳೆ ತನ್ನ ಕೊಠಡಿಯಲ್ಲಿ ನೈಲಾನ್ ಹಗ್ಗದಿಂದ ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದ ಎನ್ನಲಾಗಿದ್ದು, ಸಹಪಾಠಿ ವಿದ್ಯಾರ್ಥಿಗಳು ಬಂದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹಾಸ್ಟೆಲ್ನ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಿ, ಮೃತ ದೇಹವನ್ನು ಮಂಗಳೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತನ ತಂದೆ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುರಿದಿದೆ.