ವಾಮದಪದವು

ವಾಮದಪದವು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

www.bantwalnews.com

ವಾಮದಪದವು ಸರಕಾರಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ವಾಮದಪದವು ಸರಕಾರಿ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಚಂದ್ರಶೇಖರ (19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಾಹೀರಾತು

ಈತ ಸಕಲೇಶಪುರದ ಕರಗೂರು ನಿವಾಸಿ ಮಂಜಪ್ಪ ಪೂಜಾರಿ ಅವರ ಪುತ್ರ. ಚಂದ್ರಶೇಖರ  ಮಧ್ಯಾಹ್ನ ಕಾಲೇಜು ಬಿಟ್ಟು ವಿದ್ಯಾರ್ಥಿ ನಿಲಯಕ್ಕೆ ತೆರಳಿ, ಯಾರೂ ಇಲ್ಲದ ವೇಳೆ ತನ್ನ ಕೊಠಡಿಯಲ್ಲಿ ನೈಲಾನ್ ಹಗ್ಗದಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದ ಎನ್ನಲಾಗಿದ್ದು,  ಸಹಪಾಠಿ ವಿದ್ಯಾರ್ಥಿಗಳು ಬಂದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹಾಸ್ಟೆಲ್‌ನ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಿ, ಮೃತ ದೇಹವನ್ನು ಮಂಗಳೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತನ ತಂದೆ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುರಿದಿದೆ.

ಇಂಟರ್ ನೆಟ್ ಚಿತ್ರ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ