ರಾಜ್ಯ ವಿಧಾನ ಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೇ ಇರುವ ಅರ್ಹ ಸಾರ್ವಜನಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಎಪ್ರಿಲ್ 8 ರಂದು ಒಂದು ದಿನದ ಮಿಂಚಿನ ನೊಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಭಾನುವಾರ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತು ಮಟ್ಟದ ಅಧಿಕಾರಿ ಉಪಸ್ಥಿತರಿರಲಿದ್ದು, ಅಂತಿಮ ಮತದಾರರ ಪಟ್ಟಿಯ ಪ್ರತಿಯನ್ನು ಸಾರ್ವಜನಿಕರ ಮಾಹಿತಿಗೆ ನೀಡಲಿದ್ದಾರೆ.
ಎಲ್ಲಾ ಬೂತು ಮಟ್ಟದ ಅಧಿಕಾರಿಯವರು ಎಪ್ರಿಲ್ 8 ರಂದು ಪೂರ್ವಾಹ್ನ 10 ಗಂಟೆಯಿಂದ ಸಾಯಂಕಾಲ 5.30 ಗಂಟೆವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರು ತಮ್ಮ ಹೆಸರು ದಿನಾಂಕ: 28-2-2018 ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಲ್ಲಿ ನೊಂದಾಯಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲನೆಯಿಂದ ದೃಢಪಡಿಸಿಕೊಳ್ಳಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಅವರಿಗೆ ಸ್ಥಳದಲ್ಲಿಯೇ ಫಾರಂ 6 ನ್ನು ನೀಡಿ ಅದನ್ನು ಭರ್ತಿ ಮಾಡಿ ಅವಶ್ಯವುಳ್ಳ ದಾಖಲೆಗಳೊಂದಿಗೆ ಪಡೆಯಲಾಗುವುದು.
ಎಪ್ರಿಲ್ 8 ರಂದು ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ವಿಶೇಷ ನೊಂದಣಿ ಆಂದೋಲನ ನಡೆಯುತ್ತಿದೆ ಎಂಬುದನ್ನು ದೃಢಪಡಿಸಿಕೊಳ್ಳಲು, ಕಂದಾಯ ಇಲಾಖೆಯ ವಿವಿಧ ಅಧಿಕಾರಿಗಳು ಮತಗಟ್ಟೆಗಳಿಗೆ ಅನಿರೀಕ್ಷಿತ ಭೇಟಿ ನೀಡಲಿದ್ದಾರೆ. ಸಾರ್ವಜನಿಕರು ಈ ಅಪೂರ್ವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Be the first to comment on "ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ: ಮಿಂಚಿನ ನೋಂದಣಿ ಆಂದೋಲನ"