ಬಂಟ್ವಾಳ

ಕುಲಾಲ ಸುಧಾರಕ ಸಂಘದ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವಾರ್ಷಿಕ ಕ್ರೀಡಾಕೂಟ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದ ಬಳಿಯ ಮೈದಾನದಲ್ಲಿ ಭಾನುವಾರ  ನಡೆಯಿತು. ರಾಷ್ಟ್ರೀಯ ಕ್ರೀಡಾಪಟು ವನಿತಾ ಬಂಗೇರಾ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಬಿ.ಸತೀಶ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.  ಶಿವಾನಂದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಜಾಹೀರಾತು

ಕೋಶಾಧಿಕಾರಿ ನಾರಯಣ ಸಿ ಪೆರ್ನೆ, ಸಂಘಟನಾ ಕಾರ್ಯದರ್ಶಿ  ಮಾಧವ ಕುಲಾಲ್ ಜೊತೆ ಕಾರ್ಯದರ್ಶಿ  ಯಾಧವ ಕುಲಾಲ್, ಯೋಗೀಶ್ ಬಂಗೇರಾ, ಸಾಂಸ್ಕೃತಿಕ ಕಾರ್ಯದರ್ಶಿ  ದಾಮೋದರ ಮಾಸ್ತರ್ ಏರ್ಯ, ಲಿಂಗಪ್ಪ ಮಾಸ್ತರ್ ಪೊಸಳ್ಳಿ, ಮಹಿಳಾ ಘಟಕದ ಅಧ್ಯಕ್ಷೆ ಜಯಂತಿ ಟೀಚರ್, ಸೇವಾದಳಪತಿ ಸದಾನಂದ ಮೊಡಂಕಾಪು, ಕ್ರೀಡಾ ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ ಹಾಜರಿದ್ದರು. ಉಪಾಧ್ಯಕ್ಷ ಡಿ.ಎಂ.ಕುಲಾಲ್ ಸ್ವಾಗತಿಸಿದರು, ಕಾರ್ಯದರ್ಶಿ ಹರಿಪ್ರಸಾದ್ ಬಂಡಾರಿಬೆಟ್ಟು ವಂದಿಸಿದರು. ಕೇಶವ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ  ಸ್ವಜಾತಿ ಬಾಂಧವರಿಗೆ ವಿವಿಧ ಆಟೋಟ ಸ್ಫರ್ಧೆಗಳು ನಡೆದವು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ