ಬಂಟ್ವಾಳ

ಬಿ.ಸಿ.ರೋಡಿನಲ್ಲಿ ನಾಲ್ಕು ದಿನಗಳಿಂದ ಕುಡಿಯುವ ನೀರಿಲ್ಲ

ಕಳೆದ ನಾಲ್ಕು ದಿನಗಳಿಂದ ಬಿ.ಸಿ.ರೋಡ್ ಪೇಟೆ ಸಹಿತ ಸುತ್ತಮುತ್ತಲಿನ ನಿವಾಸಿಗಳು ಮತ್ತು ಅಂಗಡಿ ಮುಂಗಟ್ಟುಗಳು ನೀರಿಲ್ಲದೆ ಪರದಾಡುವಂತಾಗಿದೆ. ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ಈ ಸಮಸ್ಯೆ ನಿರ್ಮಾಣವಾಗಿದೆ ಎನ್ನಲಾಗಿದ್ದು, ಮಂಗಳವಾರ ಸಂಜೆವರೆಗೂ ಪರಿಹಾರ ದೊರಕಿಲ್ಲ.

ಜಾಹೀರಾತು

ಬಿ.ಸಿ.ರೋಡಿನ ಹೃದಯಭಾಗದಲ್ಲಿ ಪೈಪ್ ಒಡೆದಿದ್ದು, ಸುಮಾರು ಮೂರು ಕಡೆಗಳಲ್ಲಿ ಪೈಪ್ ಹಾನಿಯಿಂದಾಗಿ ಈ ಸಮಸ್ಯೆ ಉಂಟಾಗಿದೆ. ಈ ಪೈಕಿ ಎರಡೂ ಕಡೆ ಪೈಪ್ ಒಡೆದಿದ್ದು, ಅವನ್ನು ಪತ್ತೆಹಚ್ಚಲಾಗಿದೆ. ಮತ್ತೊಂದು ಜಾಗದ ಹುಡುಕಾಟ ನಡೆಯುತ್ತಿದ್ದು, ಇನ್ನೂ ಸಮಸ್ಯೆಗೆ ಮುಕ್ತಿ ದೊರಕಿಲ್ಲ.

ನೀರು ಸೋರುವಿಕೆಯನ್ನು ಪತ್ತೆಹಚ್ಚಲು ವಾಹನದಟ್ಟಣೆ ಸದಾ ಇರುವ ಸೋಮಯಾಜಿ ಆಸ್ಪತ್ರೆ ಎದುರು ಇರುವ ರಸ್ತೆಯ ಭಾಗವನ್ನೇ ಅಗೆಯಲಾಯಿತು. ಆದರೆ ಅಲ್ಲಿ ಸೋರಿಕೆ ಪತ್ತೆಹಚ್ಚಲಾಗದೆ ಪ್ರಯತ್ನ ನಿಷ್ಫಲವಾಯಿತು. ಮೂರು ದಿನಗಳ ಕಾಲ ನೀರಿನ ಅಭಾವ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ್ದು, ಇದರಿಂದ ನೂರಾರು ಮನೆಗಳ ಜನರಿಗೆ ನೀರಿಲ್ಲದಂತಾಗಿದೆ.  ಮುನ್ಸಿಪಾಲಿಟಿ ಕೊಳವೆಯಲ್ಲಿ ಸಮಸ್ಯೆ ಉಂಟಾಗಿದ್ದು, ನೀರು ಒದಗಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕ.ನ.ನೀ.ಒ.ಮಂಡಳಿ ಇಂಜಿನಿಯರ್ ಶೋಭಾಲಕ್ಷ್ಮೀ ತಿಳಿಸಿದ್ದಾರೆ. ಎಲ್ಲ ಅಂದುಕೊಂಡಂತೆ ನಡೆದರೆ ಬುಧವಾರ ಸಂಜೆ ನೀರು ಬರುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ