ಬಂಟ್ವಾಳ

ಕೋಮು ಸೌಹಾರ್ದ ಸ್ಥಾಪನೆಗೆ ರೈ ಗೆಲುವು ಅಗತ್ಯ: ಹರೀಶ್ ಕುಮಾರ್

ಕೋಮು ಸೌಹಾರ್ದವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ರಮಾನಾಥ ರೈ ಅವರನ್ನು ಮತ್ತೊಮ್ಮೆ ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.

ಜಾಹೀರಾತು

ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಕಚೇರಿಯನ್ನು ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸಮೀಪ ಶನಿವಾರ ಬೆಳಗ್ಗೆ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭ ಮಾತನಾಡಿದ ಸಚಿವ ರಮಾನಾಥ ರೈ, ಇದುವರೆಗೆ ನಡೆದ ಮತೀಯವಾದ ಪ್ರಕರಣಗಳಲ್ಲಿ ಕಾಂಗ್ರೆಸ್ ಗೆ ಸೇರಿದ ಹಿಂದು, ಮುಸ್ಲಿಮರ ವಿರುದ್ಧ ಪ್ರಕರಣಗಳಿಲ್ಲ. ನಾನು ಜಾತಿವಾದಿ, ಮತೀಯವಾದಿಯಲ್ಲ. ಸೌಹಾರ್ದತೆಗೋಸ್ಕರ ಕೆಲಸ ಮಾಡಿದ್ದೇನೆ, ಕಾರ್ಯಕರ್ತರು ದಿನದ ಇಪ್ಪತ್ತನಾಲ್ಕು ತಾಸು ಶ್ರಮಿಸಿದರೆ ಪಕ್ಷ ಗೆಲುವು ಶತಃಸಿದ್ಧ ಎಂದರು.

ಬೇಬಿ ಕುಂದರ್ ಕಾಂಗ್ರೆಸ್ ಸೇರ್ಪಡೆ

ಜಾಹೀರಾತು

ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಕಚೇರಿ ಉದ್ಘಾಟನೆ ಸಂದರ್ಭ ಕಳೆದ ತಿಂಗಳು ಸ್ವಯಂನಿವೃತ್ತಿ ಘೋಷಿಸಿದ್ದ ವಿಜಯಾ ಬ್ಯಾಂಕ್ ಮೆನೇಜರ್ ಹಾಗೂ ಕಬಡ್ಡಿ ಆಟಗಾರ ಮತ್ತು ಬಿಲ್ಲವ ಸಮಾಜದ ಮುಂದಾಳು ಬೇಬಿ ಕುಂದರ್ ವಿಧ್ಯುಕ್ತವಾಗಿ ಶನಿವಾರ ಕಾಂಗ್ರೆಸ್ ಸೇರಿದರು. ಅವರೊಂದಿಗೆ ಬಿಜೆಪಿಯ ಹರೀಶ್ ಗೌಡ ಮಂಚಿ, ಕುಕ್ಕಾಜೆ ಗುರುಪ್ರಸಾದ್, ಗುರುಪ್ರಸಾದ್ ಕೊಳ್ನಾಡು, ಪಂಜಿಕಲ್ಲುವಿನ ತಿಮ್ಮಪ್ಪ, ಜೆ ಡಿಎಸ್‌ನ ಹನೀಫ್ ಕಾಂಗ್ರೆಸ್ ಸೇರಿದರು.
ಈ ಸಂದರ್ಭ ಮಾತನಾಡಿದ ಕುಂದರ್, ತನಗೆ ರಮಾನಾಥ ರೈ ಮತ್ತು ಜನಾರ್ದನ ಪೂಜಾರಿ ಅವರ ಆಶೀರ್ವಾದ ಮತ್ತು ಸಹಾಯವನ್ನು ನೀಡಿದ್ದಾರೆ ಎಂದು ಸ್ಮರಿಸಿ, ಕಾಂಗ್ರೆಸ್ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.

ಈ ಸಂದರ್ಭ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬೊಳ್ಳಾಯಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ಮಮತ ಡಿ.ಎಸ್. ಗಟ್ಟಿ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್. ಖಾದರ್, ಪಕ್ಷ ಪ್ರಮುಖರಾದ ಕಣಚ್ಚೂರು ಮೋನು, ಮಂಗಳೂರು ಮೇಯರ್ ಭಾಸ್ಕರ್, ಪ್ರಮುಖರಾದ ಎ.ಸಿ.ಭಂಡಾರಿ, ಜನಾರ್ದನ ಚಂಡ್ತಿಮಾರ್, ಸದಾಶಿವ ಬಂಗೇರ, ಚಂದ್ರಶೇಖರ ಪೂಜಾರಿ,  ರಘುಪತಿ ಶಾಸ್ತ್ರಿ, ಬಿ.ಜನಾರ್ದನ ಪೂಜಾರಿಯವರ ಪುತ್ರ ದೀಪಕ್ ಪೂಜಾರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಆಲಿ, ಪ್ರಮುಖರಾದ ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಪ್ರಶಾಂತ್ ಕುಲಾಲ್ ಸಹಿತ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ


ಬಿ.ಸಿ.ರೋಡಿನ ಕಾಂಗ್ರೆಸ್ ಪ್ರಚಾರ ಸಮಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವತಿಯಿಂದ ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಯನ್ನು ಆಚರಿಸಲಾಯಿತು.

ಸಚಿವ ಬಿ.ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಸಹಿತ ಪಕ್ಷ ಪ್ರಮುಖರು ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಚಿವ ರೈ, ಅಂಬೇಡ್ಕರ ಅವರ ಆಶಯವನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಕೆಲಸ ಮಾಡಿದೆ. ಆದರೆ ಈಗಿನ ಕೇಂದ್ರ ಸರಕಾರ ಸಾಮಾಜಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಾ, ಜಾತ್ಯತೀತ ಸಿದ್ಧಾಂತಕ್ಕೆ ಅಪಾಯ ತಂಡೊಡ್ಡುವ ಪರಿಸ್ಥಿತಿ ನಿರ್ಮಿಸಿದ್ದಾರೆ ಎಂದು ದೂರಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ