ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಏ.19 ರಂದು ಬೆಳಿಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬೊಳ್ಳಾಯಿ ತಿಳಿಸಿದ್ದಾರೆ.
ಬಿ.ಸಿ.ರೋಡಿನಲ್ಲಿರುವ ಕಾಂಗ್ರೆಸ್ ಚುನಾವಣಾ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಕಾರ್ಯಾಲಯದಿಂದ ಮೆರವಣಿಗೆಯಲ್ಲಿ ತೆರಳಿ ಮಿನಿವಿಧಾನಸೌಧದಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ಚುನಾವಣಾ ಪ್ರಚಾರ ಕಚೇರಿ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ ಎಂದರು.
1200 ಕೋಟಿ ರೂ. ಅಭಿವೃದ್ಧಿ ಕಾರ್ಯ:
ಬಂಟ್ವಾಳ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿರುವುದು ಜನರು ಅವರ ಮೇಲಿಟ್ಟ ಪ್ರೀತಿ,ವಿಶ್ವಾಸಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದ ಅವರು ಕಳೆದ ಅವಧಿಯಲ್ಲಿ 1200 ಕೋ.ರೂ.ಗಳ ಅಭಿವೃದ್ದಿ ಕಾರ್ಯಗಳು ನಡೆದಿವೆ ಎಂದರು. ಬಂಟ್ವಾಳ ಮಾತ್ರವಲ್ಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಡೀ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಿದ್ದಾರೆ ಎಂದ ಅವರು, ಜಾತಿ, ಧರ್ಮ, ಮತ,ಬೇಧವಿಲ್ಲದೆ ಎಲ್ಲರನ್ನು ಸಮಾನಾಗಿ ಕಂಡಿರುವ ರಮಾನಾಥ ರೈ ಅವರ ಗೆಲುವು ನಿಶ್ಚಿತ ಎಂದರು.
ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾಧವ ಮಾವೆ, ಪಕ್ಷ ಪ್ರಮುಖರಾದ ಬಿ.ಎಚ್.ಖಾದರ್, ಕೆ.ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ಬೇಬಿ ಕುಂದರ್, ಬಿ.ಕೆ.ಇದ್ದಿನಬ್ಬ, ಪಿ.ರಾಮಕೃಷ್ಣ ಆಳ್ವ, ಪರಮೇಶ್ವರ ಮೂಲ್ಯ, ಮಧುಸೂಧನ ಶೆಣೈ, ಬಾಲಕೃಷ್ಣ ಆಳ್ವ ಕೊಡಾಜೆ, ಜಗದೀಶ ಕೊಯ್ಲ, ಜಯಂತಿ ಪೂಜಾರಿ, ಜೋಸ್ಫಿನ್ ಡಿಸೋಜ ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)