ಬಂಟ್ವಾಳ

ಜನಾರ್ದನ ಪೂಜಾರಿ ನಿವಾಸಕ್ಕೆ ರೈ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬುಧವಾರ ಬೆಳಗ್ಗೆ ಕೇಂದ್ರ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ.

ಜಾಹೀರಾತು

19ರಂದು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ರಮಾನಾಥ ರೈ ಅವರು ಇತರ ನಾಯಕರೊಂದಿಗೆ ಪೂಜಾರಿ ಅವರ ನಿವಾಸಕ್ಕೆ ಬುಧವಾರ ಬೆಳಗ್ಗೆ ತೆರಳಿದರು. ಈ ಸಂದರ್ಭ ರಮಾನಾಥ ರೈಗಳು ಪೂಜಾರಿ ಅವರ ಆಶೀರ್ವಾದ ಪಡೆದರು. ರಮಾನಾಥ ರೈ ಅವರಿಗೆ ದೇವರ ದಯೆ ಇದೆ, ಬಂಟ್ವಾಳ ಜನತೆಯ ಆಶೀರ್ವಾದ ಇದೆ ಎಂದು ಹೇಳಿದ ಪೂಜಾರಿ, ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ರಮಾನಾಥ ರೈ ಅತ್ಯಧಿಕ ಅಂತರದ ಮತಗಳಿಂದ ವಿಜಯಿಯಾಗುತ್ತಾರೆ, ದೇಶದಲ್ಲಿ ಕಾಂಗ್ರೆಸ್ ಗೆ ಅಳಿವಿಲ್ಲ ಎಂದು ಹೇಳಿದರು. ಬಳಿಕ  ರೈ ಯವರನ್ನು ಅವರ ವಾಹನದ ತನಕ ಬೀಳ್ಕೊಟ್ಟು ಪೂಜಾರಿಯವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಅಬ್ಬಾಸ್ ಅಲಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ಹೆಚ್ ಖಾದರ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts