ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ 8ರ ಹದಿಹರೆಯ ಬಾಲಕಿ ಆಶಿಫಾ ಅತ್ಯಾಚಾರ ಮತ್ತು ಬರ್ಬರ ಕೊಲೆಯನ್ನು ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಹಾಗೂ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಸೌಹಾರ್ಧ ಫ್ರೆಂಡ್ಸ್ ಕುಕ್ಕಾಜೆ ವತಿಯಿಂದ ಕುಕ್ಕಾಜೆ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮೊಹಮ್ಮದ್ ಇಂತಹಾ ಅಮಾನವೀಯ ಕೃತ್ಯ ಎಸಗಿದ ಆರೋಪಿಗಳಿಗೆ ಶಿಕ್ಷೆಯಾಗಬೇಕು, ಆಶಿಫಾ ಹೆತ್ತವರಿಗೆ ಅಲ್ಲಾಹನು ದುಖಃ ಸಹಿಸುವ ಶಕ್ತಿಯನ್ನು ನೀಡಲಿ ಎಂದರು. ಈ ಸಂದರ್ಭದಲ್ಲಿ ಊರಿನ ನೂರಾರು ಜನರು ಪಾಲ್ಗೊಂಡಿದ್ದರು. ಉಸ್ಮಾನ್ ಕುಕ್ಕಾಜೆ ಸ್ವಾಗತಿಸಿ ವಂದಿಸಿದರು.