ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಛಾಯಗ್ರಾಹಕ ಕೇಶವ ವಿಟ್ಲ ಆಯ್ಕೆ

 

 ಕಲಾವಿದ ಜಗದೀಶ್ ಅಮ್ಮುಂಜೆ ಸ್ಮಾರಕ ಆರ್ಟ್ ಗ್ಯಾಲರಿ ವತಿಯಿಂದ ನೀಡಲಾಗುವ ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಖ್ಯಾತ ಛಾಯಾಗ್ರಾಹಕ ಕೇಶವ ವಿಟ್ಲ ಅವರನ್ನು ಆಯ್ಕೆ ಮಾಡಲಾಗಿದೆಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆಪ್ರಶಸ್ತಿ ಪ್ರಧಾನ ಸಮಾರಂಭವು .೨೧ ರಂದು ಸಂಜೆ .೩೦ ಕ್ಕೆ ಮಂಗಳೂರು ಉರ್ವಾಸ್ಟೋರ್ ತುಳು ಭವನದ ಸಿರಿ ಚಾವಡಿಯಲ್ಲಿ  ನಡೆಯಲಿದೆ.

 ಗ್ರಾಮೀಣ ಪ್ರದೇಶವಾದ ವಿಟ್ಲದಲ್ಲಿ ೧೯೬೧ ರಲ್ಲಿ ಜನಿಸಿದ ಕೇಶವ ವಿಟ್ಲ ಅವರು , ೧೯೮೪ ರಲ್ಲಿ ಮುಂಗಾರು ಪತ್ರಿಕೆಯ ಮೂಲಕ ಪತ್ರಿಕಾ ಛಾಯಗ್ರಾಹಕರಾಗಿ ವೃತ್ತಿ ಜೀವನ ಆರಂಭಿಸಿದರುಅನಂತರ ೧೯೯೬ ರಿಂದ ಬೆಂಗಳೂರಿನಲ್ಲಿ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕಾ ಬಳಗದಲ್ಲಿ ಹಲವು ವರ್ಷಗಳ ಕಾಲ ಛಾಯಗ್ರಾಹಕರಾಗಿ ಸೇವೆ ಸಲ್ಲಿಸಿ, ತದನಂತರ ಪ್ರೀಲಾನ್ಸ್ ಪತ್ರಿಕಾ ಛಾಯಗ್ರಾಹಕರಾಗಿ ದಿ ಟೆಲಿಗ್ರಾಫ್ , ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಗಳಿಗೆ ಛಾಯಚಿತ್ರಗಳನ್ನು ಪೂರೈಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಶ್ರೇಷ್ಟ ಸುದ್ದಿ ಛಾಯಾಗ್ರಾಹಕ ಪ್ರಶಸ್ತಿ , ಬೆಂಗಳೂರು ಪ್ರೆಸ್ ಕ್ಲಬ್ ಜೀವಮಾನ ಸಾಧನೆಗಾಗಿ ಪ್ರಶಸ್ತಿ  , ..ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಬಲಿಯೇಂದ್ರ ಪುರಸ್ಕಾರ , ತುಳುನಾಡ ಸಿರಿ ಪ್ರಶಸ್ತಿ ಪುರಸ್ಕೃತರಾಗಿರುವ ಕೇಶವ ವಿಟ್ಲ ಅವರು ಹಲವು ಏಕವ್ಯಕ್ತಿ ಛಾಯಚಿತ್ರ ಪ್ರದರ್ಶನಗಳನ್ನು ಆಯೋಜಿಸಿದವರುಕಳೆದ ವರ್ಷ ರಾಜ್ಯ ಪ್ರವಾಸೋದ್ಯಮ ಇಲಾಖೆಯು  ಕೇಶವ ವಿಟ್ಲ ಅವರ ಕರ್ನಾಟಕದ ನೈಸರ್ಗಿಕ ಸಂಪತ್ತಿನ  ಕಾಫಿ ಟೇಬಲ್ ಪುಸ್ತಕಫೆಸೆಟ್ಸ್ ಆಫ್ ಕರ್ನಾಟಕಛಾಯಚಿತ್ರ ಸಂಪುಟವನ್ನು  ಪ್ರಕಟಿಸಿತ್ತು. ಪುಸ್ತಕ ರಾಜ್ಯದಾದ್ಯಂತ ಭಾರೀ ಜನಮನ್ನಣೆ ಪಡೆದಿತ್ತು.

.೨೧ ರಂದು ತುಳು ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ ಹಾಗೂ ಕೇರಳ ತುಳು ಅಕಾಡೆಮಿಯ ಅಧ್ಯಕ್ಷ ಪಿ.ಎಸ್. ಪುಣಿಂಚತ್ತಾಯ ಅವರು ಕೇಶವ ವಿಟ್ಲ ಅವರಿಗೆ  ಪ್ರಶಸ್ತಿ ಪ್ರಧಾನ ಮಾಡಲಿರುವರು ಎಂದು ಜಗದೀಶ್ ಅಮ್ಮುಂಜೆ ಸ್ಮಾರಕ ಆರ್ಟ್  ಗ್ಯಾಲರಿಯ ಪ್ರಕಟಣೆ ತಿಳಿಸಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಛಾಯಗ್ರಾಹಕ ಕೇಶವ ವಿಟ್ಲ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*