ಬಂಟ್ವಾಳ

ಮಂಚಿ-ಕೊಳ್ನಾಡು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಭ್ರಮ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಮಂಚಿ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏ.23ರಿಂದ 29ರವರೆಗೆ ಏಳು ದಿನಗಳ ಕಾಲ ಸಪರಿವಾರ ಶ್ರೀ ಗೋಪಾಲಕೃಷ್ಣ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ.

ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಧಾರ್ಮಿಕ ಮತ್ತು ವೈದಿಕ ವಿಗಳು ನಡೆಯಲಿದೆ. ಮಂಕುಡೆ ರಾಮಣ್ಣ ಆಚಾರ್ ಉಪಸ್ಥಿತಿಯಲ್ಲಿ, ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಪೌರೋಹಿತ್ಯದಲ್ಲಿ ಬ್ರಹ್ಮಕಲಶೋತ್ಸವ ಶಾಸ್ತ್ರಬದ್ಧ ತಾಂತ್ರಿಕ ವಿಗಳು ನಡೆಯುವುದು ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ ಭಟ್ ದೇವಳದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರೂ 3 ಕೋಟಿ ವೆಚ್ಚದಲ್ಲಿ ದೇಗುಲ ಸಂಪೂರ್ಣ ಪುನರ್ ನಿರ್ಮಾಣಗೊಳ್ಳುತ್ತಿದೆ. ಸರ್ಕಾರದ ಅನುದಾನ ಜೊತೆಗೆ ಕರ್ಣಾಟಕ ಬ್ಯಾಂಕ್, ಧರ್ಮಸ್ಥಳ ಧರ್ಮಾಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವ್ವಾಮೀಜಿ ಮತ್ತಿತರರ ಸಹಕಾರವೂ ದೊರೆತಿದೆ ಎಂದರು.

ಆಕರ್ಷಕ ಶಿಲಾಮಯ ಗರ್ಭಗುಡಿ, ತೀರ್ಥಮಂಟಪ, ಸುತ್ತುಗೋಪುರ, ಮಹಾಗಣಪತಿ, ಶಾಸ್ತಾರ, ಶ್ರೀ ದುರ್ಗಾಪರಮೇಶ್ವರಿ ಮತ್ತಿತರ ಉಪಗುಡಿ ನಿರ್ಮಾಣಗೊಂಡಿದೆ. ಕಲಾತ್ಮಕ ಸ್ವಾಗತ ಗೋಪುರ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಪರಿವಾರ ದೈವಗಳಿಗೆ ಪ್ರತ್ಯೇಕ ಗುಡಿ ನಿರ್ಮಿಸಲಾಗಿದೆ. ಬ್ರಹ್ಮಕಲಶೋತ್ಸವದ ಯಶಸ್ವಿಗಾಗಿ ಹಲವು ಉಪ ಸಮಿತಿ ರಚಿಸಲಾಗಿದ್ದು, ಈಗಾಗಲೇ ಶ್ರಮದಾನ ಮೂಲಕ ಭಕ್ತರು ೩ ಸಾವಿರ ಮಂದಿಯಷ್ಟು ಮಾನವ ಶ್ರಮ ವಿನಿಯೋಗಿಸಿದ್ದಾರೆ ಎಂದು ತಿಳಿಸಿದರು.

23ರಂದು ಮಧ್ಯಾಹ್ನ ೩ಗಂಟೆಗೆ ಮೆಲ್ಕಾರ್ ಬಿರ್ವ ಸೆಂಟರ್ ಬಳಿಯಿಂದ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ೨೯ರಂದು ಬೆಳಿಗ್ಗೆ ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಮಂಕುಡೆ ರಾಮಣ್ಣ ಆಚಾರ್ ಮತ್ತು ಕೆಮ್ಮಿಂಜೆ ನಾಗೇಶ ತಂತ್ರಿ ಬ್ರಹ್ಮಕಲಶೋತ್ಸವ ನೆರವೇರಿಸುವರು. ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಬ್ರಹ್ಮಕಲಶೋತ್ಸವ ಪ್ರಯುಕ್ತ ದೇವಳದಲ್ಲಿ ೧೦೮ ತೆಂಗಿನಕಾಯಿ ಗಣಯಾಗ, ದುರ್ಗಾಪೂಜೆ, ಶತರುದ್ರಾಭಿಷೇಕ, ಪ್ರತಿದಿನ ಸಂಜೆ ಧಾರ್ಮಿಕ ಸಭೆ, ಆಶೀರ್ವಚನ, ಧಾರ್ಮಿಕ ಉಪನ್ಯಾಸ, ಹರಿಕಥೆ, ಯಕ್ಷಗಾನ ಬಯಲಾಟ, ತಾಳಮದ್ದಳೆ, ಜಾದೂ ಪ್ರದರ್ಶನ, ಭಜನೆ, ಪೌರಾಣಿಕ ನಾಟಕ, ಭಕ್ತಿಗಾನ ಸುಧಾ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.

ಮುಂದಿನ ದಿನಗಳಲ್ಲಿ ಸಮಿತಿಯು ಗೋಶಾಲೆ, ಪುಷ್ಕರಿಣಿ, ಸಭಾಭವನ ನಿರ್ಮಿಸುವ ಯೋಜನೆ ಹಾಕಿಕೊಂಡಿದೆ ಎಂದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಸಂಚಾಲಕ ಎನ್.ಆರ್.ಈಶ್ವರ ಭಟ್ ಕೋಕಳ, ಉಪಾಧ್ಯಕ್ಷರಾದ ರಾಮಕೃಷ್ಣ ನಾಯಕ್ ಕೋಕಳ, ಬಾಲಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿಜಯ ಶೆಟ್ಟಿ ಸಾಲೆತ್ತೂರು, ಪ್ರಧಾನ ಅರ್ಚಕ ಟಿ.ಸೂರ್ಯನಾರಾಯಣ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಳಿನಾಕ್ಷಿ, ಜಯಂತಿ ಕೆ.ಶೆಟ್ಟಿ, ಮಹಿಳಾ ಘಟಕ ಅಧ್ಯಕ್ಷೆ ಶ್ರೀದೇವಿ ಮತ್ತಿತರರು ಇದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts