ಬಸವಣ್ಣ ಚಿಂತನೆ ಸಾರ್ವಕಾಲಿಕವಾಗಿದ್ದು, ಸಮಾಜದಲ್ಲಿ ನೆಲೆಯೂರಿದ್ದ ಸಾಮಾಜಿಕ ಪಿಡುಗು, ಜಾತಿ ವ್ಯವಸ್ಥೆಗಳ ವಿರುದ್ಧ ಕ್ರಾಂತಿ ಮೂಡಿಸಿದ್ದಾರೆ ಎಂದು ತಹಶೀಲ್ದಾರ್ ವೈ. ರವಿ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಬಸವ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರು, ಬಸವಣ್ಣರ ತತ್ವ, ಜೀವನಾದರ್ಶವನ್ನು ಮೈಗೂಡಿಸುವ ಕಾರ್ಯ ಪ್ರತಿಯೊಬ್ಬರಿಂದಲೂ ನಡೆಯಬೇಕೆಂದು ತಿಳಿಸಿದರು.
ಉಪ ತಹಶೀಲ್ದಾರ್ ಗಳಾದ ಎ. ಪ್ರಕಾಶ್, ರಾಜೇಶ್ ನಾಯ್ಕ್, ಗ್ರೆಟ್ಟಾ ಮಸ್ಕರೇಂಜಸ್, ಆಹಾರ ಶಾಖೆಯ ಶ್ರೀನಿವಾಸ್ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿದರು. ದ.ಕ.ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಜನಾರ್ಧನ ವಂದಿಸಿದರು.