ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ರಮಾನಾಥ ರೈ ಅವರು ಗುರುವಾರ ಬೆಳಗ್ಗೆ ಬಂಟ್ವಾಳದಲ್ಲಿ ನಾಮಪತ್ರ ಸಲ್ಲಿಸಿದರು.
ಬಿ.ಸಿರೋಡಿನಲ್ಲಿರುವ ಪಕ್ಷ ಕಚೇರಿಯಿಂದ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ತಾಲೂಕು ಮಿನಿ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿ.ಎಚ್.ಖಾದರ್, ಜಿನರಾಜ ಆರಿಗ, ಜೋಸ್ಫಿನ್ ಡಿಸೋಜ ಮತ್ತು ಚಿದಾನಂದ ಪೂಜಾರಿ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೈ, ಎರಡು ಮತೀಯ ಪಕ್ಷಗಳೊಂದಿಗೆ ತನ್ನ ಸ್ಪರ್ಧೆ ಇರಲಿದೆ ಎಂದು ಹೇಳಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…