Rajesh Naik Ulippady (BJP)
ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಎಸ್.ಡಿ.ಪಿ.ಐ. ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಶುಕ್ರವಾರ ಮಧ್ಯಾಹ್ನದ ಬಳಿಕ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
Riyaz Pharangipet (SDPI)
ಬಿಜೆಪಿ ಸ್ಪರ್ಶ ಕಲಾ ಮಂದಿರದಲ್ಲಿ ಸಭೆ ನಡೆಸಲಿದ್ದರೆ, ಎಸ್.ಡಿ.ಪಿ.ಐ. ಲಯನ್ಸ್ ಕ್ಲಬ್ ವಠಾರದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಸಮಾವೇಶ ನಡೆಸಲಿದೆ ಎಂದು ಪ್ರಕಟಿಸಿದೆ. ಈಗಾಗಲೇ ಜೆಡಿಯು ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಗುರುವಾರ ರಮಾನಾಥ ರೈ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು.