ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಗಳನ್ನು ಸ್ವೀಕರಿಸುತ್ತಾರೆ.
ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಲೋಕಾಯುಕ್ತರ ಪ್ರಕಟಣೆ ತಿಳಿಸಿದೆ.
ಯಾವಾಗ ಬರ್ತಾರೆ?
ಏಪ್ರಿಲ್ 24 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ವಿಶೇಷ ತಹಶೀಲ್ದಾರರ ಕಛೇರಿ, ಏಪ್ರಿಲ್ 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಛೇರಿ, ಮಧ್ಯಾಹ್ನ 3 ರಿಂದ ಸಂಜೆ 4-30 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಛೇರಿ, ಏಪ್ರಿಲ್ 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಛೇರಿ, ಮಧ್ಯಾಹ್ನ 3 ರಿಂದ ಸಂಜೆ 4-30 ಗಂಟೆಯ ವರೆಗೆ ಪುತ್ತೂರು ತಾಲೂಕು ಕಛೇರಿಯಲ್ಲಿ ಅವರು ಇರ್ತಾರೆ.
ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದು. ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ: 0824-2429197/ 0224-2453420/ 9886542369 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Be the first to comment on "ಲೋಕಾಯುಕ್ತ ಅಧಿಕಾರಿಗಳು ದೂರು ಪಡೆಯಲು ಇಲ್ಲಿಗೆ ಬರ್ತಾರೆ…"