ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಬಂಟ್ವಾಳಕ್ಕೆ ಏ.27ರಂದು ಆಗಮಿಸುವ ಕುರಿತು ಅಭ್ಯರ್ಥಿ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡಿನ ಚುನಾವಣಾ ಪ್ರಚಾರ ಸಮಿತಿ ಕಚೇರಿಯಲ್ಲಿ ಸಭೆ ನಡೆಯಿತು.
ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಆಗಮಿಸಲು ಕಾರ್ಯಕರ್ತರು ಶ್ರಮವಹಿಸಬೇಕೆಂದು ರಮಾನಾಥ ರೈರವರು ಸಲಹೆ ನೀಡಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮೊಹಮ್ಮದ್, ಮಂಜುಳಾ ಮಾಧವ ಮಾವೆ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಎಚ್. ಖಾದರ್, ಪ್ರಚಾರಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಡಿಸಿಸಿ ಉಪಾಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಎಸ್.ಸಿ.ಎಸ್.ಟಿ ಘಟಕದ ಅಧ್ಯಕ್ಷರಾದ ಜನಾರ್ಧನ್ ಚೆಂಡ್ತಿಮಾರ್, ಅಲ್ಪಸಂಖ್ಯಾತರ ಅಧ್ಯಕ್ಷರಾದ ಆಲ್ಬಟ್೯, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರಾದ ನಸೀಂ ಬೇಗಂ, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್ ಉಪಸ್ಥಿತರಿದ್ದರು.