ಬಂಟ್ವಾಳ

ರಾಹುಲ್ ಆಗಮನಕ್ಕೆ ಬಿ.ಸಿ.ರೋಡ್ ನಲ್ಲಿ ಸಿದ್ಧತೆ


ಏ.27ರಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಆಗಮನ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಉದ್ಯಾನವನ ಮುಂಭಾಗದ ಮೈದಾನ ಸಜ್ಜುಗೊಳ್ಳುತ್ತಿದೆ. ಸುಮಾರು 20 ಸಾವಿರ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಬಂಟ್ವಾಳ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ತಿಳಿಸಿದ್ದಾರೆ.

ಬಿ.ಸಿ.ರೋಡಿನ ಕಾಂಗ್ರೆಸ್ ಪ್ರಚಾರ ಸಮಿತಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಡಂಕಾಪುವಿನಲ್ಲಿ ಹೆಲಿಕಾಪ್ಟರ್ ನಿಂದ ಇಳಿದು, ಹೆದ್ದಾರಿ ಮೂಲಕ ಕಾರ್ಯಕ್ರಮದ ಮೈದಾನಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭ ಪಕ್ಷದ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಇದರ ಸಂಪೂರ್ಣ ನೇತೃತ್ವ ವಹಿಸಲಿದ್ದಾರೆ. ಕ್ಷೇತ್ರದ ಕಾರ್ಯಕರ್ತರು ಪಕ್ಷದ ಅಭಿಮಾನಿಗಳು ಭಾಗವಹಿಸುವಂತೆ ಈ ಸಂದರ್ಭ ಅವರು ಮನವಿ ಮಾಡಿದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ನಾಯಕ್, ಪರಮೇಶ್ವರ ಮೂಲ್ಯ, ಮಧುಸೂಧನ ಶೆಣೈ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ