for Video Click here:
For News Click Here:
ಕಾಂಗ್ರೆಸ್ ಜನರ ಮನ್ ಕೀ ಬಾತ್ ಆಲಿಸಿದೆ. ನಮ್ಮ ಪ್ರಣಾಳಿಕೆಯಲ್ಲಿ ಜನರ ಮನದ ಮಾತಿದೆ. ಬಸವಣ್ಣನ ವಚನದಂತೆ ನಾವು ನುಡಿದಂತೆ ನಡೆದಿದ್ದೇವೆ.
ಬಂಟ್ವಾಳದಲ್ಲಿ ನಡೆದ ಚುನಾವಣಾ ಬಹಿರಂಗ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದು ಹೀಗೆ.
ಮಂಗಳೂರಿನಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಬಿಡುಗಡೆಗೊಳಿಸಿದ ನಂತರ ಬಂಟ್ವಾಳದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಭಾಷಣದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ರೆಡ್ಡಿ ಬ್ರದರ್ಸ್ ಮತ್ತು ಯಡಿಯೂರಪ್ಪ ಮತ್ತೆ ಒಂದಾಗುತ್ತಿದ್ದಾರೆ ಎಂದು ಹೇಳಿದ ಅವರು, ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಬ್ಬರೂ ಬಿಜೆಪಿಯಲ್ಲಿ ರೆಡ್ಡಿ ಸಹೋದರರ ಪ್ರಾಬಲ್ಯದ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದು ಹಾಗೂ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರು ಜೈಕಾರದ ಮಧ್ಯೆ ಸಭಾವೇದಿಕೆಗೆ ಆಗಮಿಸಿದ್ದು ಗಮನಾರ್ಹ.
ವೇದಿಕೆಯ ಪಕ್ಕ ಅಭ್ಯರ್ಥಿಗಳಾದ ರಮಾನಾಥ ರೈ, ಡಾ. ರಘು, ಶಕುಂತಳಾ ಶೆಟ್ಟಿ, ಯು.ಟಿ.ಖಾದರ್ , ಜೆ.ಆರ್.ಲೋಬೊ ಕುಳಿತು ಭಾಷಣ ಆಲಿಸಿದರು
ಪ್ರಮುಖರಾದ ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಡಾ.ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಪಕ್ಷದ ಜಿಲ್ಲಾ ಉಸ್ತುವಾರಿ ವಿಷ್ಣುನಾಥನ್, ಪಕ್ಷದ ಸ್ಥಳೀಯ ಮುಖಂಡರಾದ ಚಂದ್ರಪ್ರಕಾಶ್ ಶೆಟ್ಟಿ, ಜನಾರ್ಧನ ಚಂಡ್ತಿಮಾರ್, ಬಿ.ಇಬ್ರಾಹಿಂ, ಬಿ.ಎಚ್.ಖಾದರ್, ರಾಮಕೃಷ್ಣ ಆಳ್ವ, ಮುಹಮ್ಮದ್ ನಂದರಬೆಟ್ಟು, ಎಂ.ಎಸ್.ಮುಹಮ್ಮದ್, ಪದ್ಮಶೇಖರ ಜೈನ್, ಮಮತಾ ಗಟ್ಟಿ, ಮಂಜುಳ ಮಾಧವ ಮಾವೆ, ಜಿನರಾಜ ಆರಿಗ, ಬೇಬಿ ಕುಂದರ್, ಮಾಧವ ಮಾವೆ, ಸುದರ್ಶನ್ ಜೈನ್, ಉಸ್ಮಾನ್ ಕರೋಪಾಡಿ , ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಅಲಿ, ಸಂಜೀವ ಪೂಜಾರಿ ಬೊಳ್ಳಾಯಿ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಸದಾಶಿವ ಬಂಗೇರ, ಎಂ.ಎಸ್.ಮಹಮ್ಮದ್, ಬಾಲಕೃಷ್ಣ ಆಳ್ವ ಕೊಡಾಜೆ ಸಹಿತ ಪಕ್ಷದ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.