ಬಂಟ್ವಾಳ

ಮಹಿಳೆಯರ ಅಭ್ಯುದಯಕ್ಕೆ ಕ್ರಾಂತಿಕಾರಿ ಕ್ರಮ: ರಮಾನಾಥ ರೈ

ಸಿದ್ದರಾಮಯ್ಯ ಸರಕಾರ ಮಹಿಳೆಯರ ಅಭಿವೃದ್ಧಿಗೆ ಕ್ರಾಂತಿಕಾರಕ ಕ್ರಮ ಕೈಗೊಂಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಹೇಳಿದರು.

ಅವರು ಬಿ.ಮೂಡದಲ್ಲಿ ಜರುಗಿದ ಕಾಂಗ್ರೆಸ್ ನ ಮಹಿಳಾ ಸಭೆಯಲ್ಲಿ ಮಾತನಾಡುತ್ತಿದ್ದರು. ಸಭೆಯಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ಬಾಸ್ ಅಲಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಬೇಬಿ ಕುಂದರ್, ಸಂಜೀವ ಪೂಜಾರಿ ಬೊಳ್ಳಾಯಿ, ಶರೀಫ್, ಪ್ರಶಾಂತ್ ಕುಲಾಲ್, ಪ್ಲೋಸಿ ಡಿ’ಸೋಜ, ಪ್ಲೋಸಿ. ಸಭೆಯಲ್ಲಿ ಉಪಸ್ಥಿತರಿದ್ದರು.

ಇದೇವೇಳೆ ಜಕ್ರಿಬೆಟ್ಟು, ರಾಯಿ, ಕೊಯ್ಲದಲ್ಲಿ ನಡೆದ ಸಭೆಗಳಲ್ಲಿ ಮಾತನಾಡಿದ ಅವರು, ಜನರಿಗಾಗಿ ನಾನು ರಾತ್ರಿ ಹಗಲೆನ್ನದೆ ಕಾರ್ಯನಿರ್ವಹಿಸಿದ್ದೇನೆ. ಆದರೆ ಬಿಜೆಪಿ ರಾತ್ರಿ ಹಗಲೆನ್ನದೆ ನನ್ನ ಬಗ್ಗೆ ಸುಳ್ಳು ಅಪಪ್ರಚಾರದಲ್ಲಿ ನಿರತವಾಗಿದೆ. ಸುಳ್ಳು ಹೇಳುವುದೇ ಬಿಜೆಪಿಯ ಪ್ರಚಾರವಾಗಿದೆ. ಜನರು ಈ ಸುಳ್ಳಿಗೆ ತಕ್ಕ ಉತ್ತರ ನೀಡುತ್ತಾರೆ. ನನ್ನ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀ ರಕ್ಷೆಯಾಗಿದೆ ಎಂದರು.

ಬ್ಲಾಕ್ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಚಂದ್ರಪ್ರಕಾಶ್ ಶೆಟ್ಟಿ, ಬಿ.ಎಚ್. ಖಾದರ್, ಬೇಬಿ ಕುಂದರ್, ರಾಜಶೇಖರ ಕೋಟ್ಯಾನ್, ಜಗದೀಶ್ ಕೊಯಿಲ, ಮಲ್ಲಿಕಾ ಶೆಟ್ಟಿ,  ಸುಧೀರ್ ಕುಮಾರ್ ಶೆಟ್ಟಿ. ರಿಯಾಝ್, ಮಂಜುಳಾ ಶೀತಲ್ ಮೊದಲಾದವರು ಈ ಸಂದರ್ಭ ಹಾಜರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts