ಭಯಮುಕ್ತ ಬಂಟ್ವಾಳ ನಿರ್ಮಾಣಕ್ಕೆ ಬಿಜೆಪಿ ಗೆಲ್ಲಿಸಲು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮನವಿ ಮಾಡಿದರು.
ಪಂಜಿಕಲ್ಲು ಗ್ರಾಮದ ಸೊರ್ನಾಡು, ಪುಂಚೋಡಿಯಲ್ಲಿ ನಡೆದ ಪಕ್ಷದ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು.
ಬಂಟ್ವಾಳದಲ್ಲಿ ಬಿಜೆಪಿಯು ಮುಂದಿನ ದಿನಗಳಲ್ಲಿ ಯುವಕರಿಗಾಗಿ ಉದ್ಯೋಗ ಸೃಷ್ಟಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಸಂಜೀವ ಪೂಜಾರಿ ಪಿಲಿಂಗಾಲ್, ಲಕ್ಷ್ಮಣ್ ಪಂಜಿಕಲ್ಲು, ಕರುಣೇಂದ್ರ ಪೂಜಾರಿ, ಚಿದಾನಂದ ಕುಲಾಲ್, ಪ್ರಕಾಶ್ ಅಂಚನ್, ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…