ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ಲಯನ್ಸ್ ಮತ್ತು ಲಿಯೊ ಕ್ಲಬ್, ಕದ್ರಿ ಹಿಲ್ಸ್, ಮಂಗಳೂರು ಮತ್ತು ಗುರು ಎಜುಕೇಶನ್ ಟ್ರಸ್ಟ್ ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನ ಇವರ ಜಂಟಿ ಆಶ್ರಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು.
ಅಧ್ಯಕ್ಷತೆಯನ್ನು ಗುರು ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ವಿಘ್ನರಾಜ್ ಭಟ್ ವಹಿಸಿಕೊಂಡಿದ್ದರು. ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವೈದ್ಯೆ ಡಾ| ನಿಶ್ಚಿತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಸರಸ್ವತಿ ವಿದ್ಯಾಲಯದ ಸಂಚಾಲಕರಾದ ಈಶ್ವರ ಪ್ರಸಾದ್ಪ್ರಸ್ತಾವನೆಗೈದರು.
ಲಯನ್ಸ್ ಮತ್ತು ಲಿಯೊ ಕ್ಲಬ್ನ ಉಪಾಧ್ಯಕ್ಷರಾದ ಡಾ| ಸುರೇಶ್ ನೆಗಳಗುಳಿ, ಇಂತಹ ಸಾರ್ವಜನಿಕ ಉಪಯುಕ್ತ ಕೆಲಸಗಳನ್ನು ಹಳ್ಳಿ ಪ್ರದೇಶದಲ್ಲಿ ನಡೆಸಿ ಶ್ರೀ ಸರಸ್ವತಿ ವಿದ್ಯಾಲಯವು ಮಹತ್ತರವಾದ ಕೊಡುಗೆಯನ್ನು ನೀಡಿದೆ ಎಂದು ಹೇಳಿದರು.
ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಮಧುರಾ ಈಶ್ವರ ಪ್ರಸಾದ್ ಸ್ವಾಗತಿಸಿದರು. ಲಯನ್ಸ್ ಮತ್ತು ಲಿಯೊ ಕ್ಲಬ್ನ ಕಾರ್ಯದರ್ಶಿಗಳಾದ ಶಂಕರ ನಾರಾಯಣ ಕಾರಂತ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀಲತಾ ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಹೃದ್ರೋಗ, ಕಿವಿ, ಮೂಗು, ಗಂಟಲು ಶಸ್ತ್ರ ಚಿಕಿತ್ಸೆ, ಸ್ತ್ರೀರೋಗ ಮತ್ತು ಪ್ರಸೂತಿ, ಮಕ್ಕಳ ಚಿಕಿತ್ಸೆ, ಮಧುಮೇಹ, ರಕ್ತ ಪರೀಕ್ಷೆ, ಉಚಿತ ಔಷಧಿ ವಿತರಣೆ, ಸಂಪೂರ್ಣ ಆರೋಗ್ಯ ತಪಾಸಣೆ ಮುಂತಾದವುಗಳ ಪ್ರಯೋಜನವನ್ನು 200ಕ್ಕೂ ಹೆಚ್ಚು ಮಂದಿ ಉಚಿತವಾಗಿ ಪಡೆದರು.