ಕಟ್ಟಡದ ಮಾಲೀಕರು ಇಲ್ಲದ ಸಮಯದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಯಾರೂ ಇಲ್ಲದ ಸಂದರ್ಭ ಭಿತ್ತಿಪತ್ರಗಳನ್ನು ಅಂಟಿಸುವುದು ಕಂಡುಬಂದರೆ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆ ೧೯೫೧ರಡಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಬಂಟ್ವಾಳ ಕ್ಷೇತ್ರ ಚುನಾವಣಾಧಿಕಾರಿ ರವಿ ಬಸರಿಹಳ್ಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಅನುಮಾನಾಸ್ಪದ ವ್ಯಕ್ತಿಗಳು ಧರ್ಮ ಮತ್ತು ಪಕ್ಷಗಳ ಹೆಸರಲ್ಲಿ ಮನೆ ಗೋಡೆಗಳ ಮೇಲೆ ಮಾಲೀಕರ ಅನುಮತಿ ಇಲ್ಲದೆ ಭಿತ್ತಿಪತ್ರಗಳನ್ನು ಅಚಿಟಿಸುವುದು ಕಂಡುಬಂದಿದೆ. ಇಂಥ ಪ್ರಕರಣಗಳ ವಿಚಾರಣೆಯನ್ನೂ ಮಾಡಲಾಗಿದೆ. ಮಾಲೀಕರು ತಾವು ಇಲ್ಲದ ಸಮಯ ಅಪರಿಚಿತ ವ್ಯಕ್ತಿಗಳು ಭಿತ್ತಿಪತ್ರ ಅಂಟಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈಗಾಗಲೇ ಪೊಲೀಸ್ ಠಾಣೆಯಲ್ಲಿ ಇಂಥ ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.