ದೇಶದ 22 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದು, ಕರ್ನಾಟಕದಲ್ಲೂ ಪುನರಾವರ್ತನೆ ಆಗಲಿದೆ. ಬಿಜೆಪಿಯಿಂದಷ್ಟೇ ದೇಶದ ಅಭಿವೃದ್ದಿ ಆಗುತ್ತದೆ ಎಂದು ಮುಂಬೈನ ಬಿಜೆಪಿ ಸಂಸದ ಗೋಪಾಲ ಶೆಟ್ಟಿ ಹೇಳಿದರು.
ಸಜಿಪಮೂಡ ಗ್ರಾಮದ ಮಾರ್ನಬೈಲಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಕ್ಕು ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳ ಬಳಿಕ ವಿದ್ಯುತ್ ಸಂಪರ್ಕ ಒದಗಿಸಿದ್ದು ಮೋದಿ ಸರಕಾರದ ಆಡಳಿತದ ಅವಧಿಯಲ್ಲಿ, ಉಜ್ವಲ ಯೋಜನೆ ಮೂಲಕ ಪ್ರತಿ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕ ನೀಡುವ ಮೂಲಕ ಈ ದೇಶದ ಗೃಹಣಿಯರ ಬದುಕಿನಲ್ಲಿ ಮಂದಹಾಸ ಮೂಡಿಸುವಲ್ಲಿ ಬಿಜೆಪಿ ಮಹತ್ತರ ಪಾತ್ರ ವಹಿಸಿದೆ ಎಂದರು.
ಬಳಿಕ ಬಿಜೆಪಿ ಅಭ್ಯರ್ಥಿ ಉಳಿಪ್ಪಾಡಿ ರಾಜೇಶ್ ನಾಕ್ ಮಾತನಾಡಿ ಈ ಬಾರಿ ಬಂಟ್ವಾಳದ ಜನತೆ ಬದಲಾವಣೆಯನ್ನು ಬಯಸಿದ್ದು ಜನರ ನಿರೀಕ್ಷೆಯಂತೆ ಬಂಟ್ವಾಳದಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.
ಈ ಸಂದರ್ಭ ಬಿಜೆಪಿ ಪ್ರಮುಖರಾದ ಪುರುಷ ಸಾಲಿಯಾನ್ ಕಳ್ಳಿಗೆ, ಸಚ್ಚಿದಾನಂದ ಶೆಟ್ಟಿ ಮುಂಬೈ, ಸಂತೋಷ್ ಶೆಟ್ಟಿ ಮುಂಬೈ, ಜಯಶಂಕರ ಬಾಸ್ರಿತ್ತಾಯ,ರವೀಂದ್ರ ಕಂಬಳಿ, ಶ್ರೀಕಾಂತ್ ಶೆಟ್ಟಿ, ಪ್ರವೀಣ್ಗಟ್ಟಿ, ಮೋಹನ್ ಪಿ.ಎಸ್ ಮತ್ತು ಪ್ರಮುಖ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…