ಬಂಟ್ವಾಳ ತಾಲೂಕಿನ ಶಂಭೂರಿನಲ್ಲಿರುವ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಗೆ ಒಟ್ಟಾರೆಯಾಘಿ ಶೇ. 93.5 ಫಲಿತಾಂಶ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬಂದಿದ್ದು, ಇದರಲ್ಲಿ ಆಂಗ್ಲ ಮಾಧ್ಯಮ ವಿಭಾಗಕ್ಕೆ ಶೇ.100 ಫಲಿತಾಂಶ ದೊರಕಿದೆ.
ಜಾಹೀರಾತು
ಪರೀಕ್ಷೆಗೆ ಕನ್ನಡ ಮಾಧ್ಯಮದಲ್ಲಿ 49 ವಿದ್ಯಾರ್ಥಿಗಳು ಹಾಜರಾಗಿದ್ದು ೪೪ ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಅಂಗ್ಲ ಮಾಧ್ಯಮದಲ್ಲಿ ಪ್ರಥಮ ಬಾರಿಗೆ 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಾಡಾ 100 ಫಲಿತಾಂಶ ದಾಖಲಿಸಿರುತ್ತದೆ. 4 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಆಂಗ್ಲ ಮಾಧ್ಯಮ ವಿಭಾಗದ ವಿದ್ಯಾರ್ಥಿ ಭರತ್ 567 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಚಿನ್ಮಯಿ 541 ಅಂಕಗಳನ್ನು ಪಡೆದು ಕನ್ನಡ ಮಾಧ್ಯಮದಲ್ಲಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಇದು ಈ ಶಾಲೆಯ ಆಂಗ್ಲ ಮಾಧ್ಯಮದ ಮೊದಲನೆ ಬ್ಯಾಚ್ ಆಗಿದೆ ಎಂದು ಮುಖ್ಯೋಪಾಧ್ಯಾಯ ಕಮಲಾಕ್ಷ ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೊಂಡಾಲ ಸರಕಾರಿ ಹೈಸ್ಕೂಲಿನ ಆಂಗ್ಲ ಮಾಧ್ಯಮಕ್ಕೆ ಶೇ.100 ಫಲಿತಾಂಶ"
Be the first to comment on "ಬೊಂಡಾಲ ಸರಕಾರಿ ಹೈಸ್ಕೂಲಿನ ಆಂಗ್ಲ ಮಾಧ್ಯಮಕ್ಕೆ ಶೇ.100 ಫಲಿತಾಂಶ"