ಬಿಜೆಪಿ ಪರ ಪ್ರಚಾರಕ್ಕೆ ಬರಲಿದ್ದಾರೆ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಗುರುವಾರ ಮೇ. 10ರಂದು ಬಂಟ್ವಾಳಕ್ಕೆ ಅಗಮಿಸಲಿದ್ದಾರೆ. ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯು. ರಾಜೇಶ್ ನಾಯ್ಕ್ ಪರ ಮತಯಾಚನೆ ಮಾಡಲಿದ್ದು, ಗುರುವಾರ ಮಧ್ಯಾಹ್ನ 2.30 ಕ್ಕೆ ಬಿ.ಸಿ.ರೋಡಿನ ಪೊಳಲಿ ದ್ವಾರದ ಬಳಿಯಿಂದ ಬಿ.ಸಿ.ರೋಡ್ ನಗರದಲ್ಲಿ ರೋಡ್ ಶೋ. ಮತ್ತು ಚುನಾವಣಾ ಪ್ರಚಾರದ ಸಮಾರೋಪದಲ್ಲಿ ಭಾಗವಹಿಸುವರು.

ಜಾಹೀರಾತು

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ವಿರುದ್ಧ ಎರಡನೇ ಬಾರಿ ಕಣಕ್ಕಿಳಿದಿರುವ ಯು.ರಾಜೇಶ್ ನಾಯ್ಕ್ ಮನೆ ಮನೆಗೆ ಭೇಟಿ ನೀಡುವ ಮೂಲಕ ಮತಯಾಚನೆಯಲ್ಲಿ ತೊಡಗಿದ್ದು, ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿಯ ವರಿಷ್ಠ ನಾಯಕರು ಅಭ್ಯರ್ಥಿ ಪರ ಮತಯಾಚನೆಗೆ ಬಂದಿರಲಿಲ್ಲ. ಅಭ್ಯರ್ಥಿ ಘೋಷಣೆಗೂ ಮುನ್ನ ಪಕ್ಷದ ಅಧ್ಯಕ್ಷ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಬಂದಿದ್ದೇ ಕೊನೆ.

ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಆಗಮಿಸಿ ರೈ ಪರ ಪ್ರಚಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಪರವಾಗಿ ಪಕ್ಷದ ಪ್ರಬಲ ತಾರಾ ಪ್ರಚಾರಕ ಯೋಗಿ ಆದಿತ್ಯನಾಥ್ ಬಂಟ್ವಾಳಕ್ಕೆ ಆಗಮಿಸುತ್ತಿರುವುದು ವಿಶೇಷ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಜೆಪಿ ಪರ ಪ್ರಚಾರಕ್ಕೆ ಬರಲಿದ್ದಾರೆ ಯೋಗಿ ಆದಿತ್ಯನಾಥ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*